ಸುದ್ದಿ ಸಂಕ್ಷಿಪ್ತ

ತ್ಯಾಜ್ಯ ವಿಲೇವಾರಿ ನಿಲ್ಲಿಸಬೇಕೆಂದು ಮನವಿ

ಸೋಮವಾರಪೇಟೆ, ಆ.30: ಜನವಸತಿ ಪ್ರದೇಶದಲ್ಲಿ ಪಟ್ಟಣ ಪಂಚಾಯಿತಿಯವರು ತ್ಯಾಜ್ಯ ವಿಲೇವಾರಿ ಮಾಡುತ್ತಿರುವುದರಿಂದ ಸುತ್ತಲಿನ ಪರಿಸರ ಹಾಳಾಗುತ್ತಿದೆ. ಕೂಡಲೇ ತ್ಯಾಜ್ಯ ವಿಲೇವಾರಿ ನಿಲ್ಲಿಸಬೇಕೆಂದು ವೀರಶೈವ ಸಮಾಜದ ಪದಾಧಿಕಾರಿಗಳು ಬುಧವಾರ ಮನವಿ ಸಲ್ಲಿಸಿದರು.

ಇಲ್ಲಿನ ಬಸವೇಶ್ವರ ದೇವಾಲಯದ ರಸ್ತೆಯ ದೇವಸ್ಥಾನದ ಸಮೀಪ ತ್ಯಾಜ್ಯ ವಿಲೇವಾರಿ ಮಾಡುತ್ತಿರುವುದರಿಂದ ಸೊಳ್ಳೆ ಮತ್ತು ನೊಣಗಳ ಹಾವಳಿ ಹೆಚ್ಚಾಗಿದ್ದು ,ಅಕ್ಕಪಕ್ಕದ ಮನೆಗಳಿಗೆ ತೊಂದರೆಯಾಗಿದೆ. ಕೂಡಲೇ ಈ ಸ್ಥಳದಲ್ಲಿ ತ್ಯಾಜ್ಯ ವಿಲೇವಾರಿ ನಿಲ್ಲಿಸಬೇಕೆಂದು  ವೀರಶೈವ ಸಮಾಜದ ಅಧ್ಯಕ್ಷ ಕೆ.ಎನ್. ಶಿವಕುಮಾರ್ ಆಗ್ರಹಿಸಿದ್ದಾರೆ. ಮನವಿಯನ್ನು ಪಟ್ಟಣ ಪಂಚಾಯಿತಿ ಆರೋಗ್ಯಾಧಿಕಾರಿ ಉದಯಕುಮಾರ್ ಹಾಗೂ ಪೊಲೀಸ್ ವೃತ್ತ ನಿರೀಕ್ಷಕರಿಗೆ ಸಲ್ಲಿಸಿದರು.

ಈ ಸಂದರ್ಭ ಸಮಾಜದ ಪ್ರಧಾನ ಕಾರ್ಯದರ್ಶಿ ಜೇ.ಸಿ. ಶೇಖರ್, ಶೆಟ್ರು ತೇಜಸ್ವಿ, ಪ್ರಮುಖರಾದ ಸಂಜಯ್ ಉಪಸ್ಥಿತರಿದ್ದರು. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: