
ಕರ್ನಾಟಕಪ್ರಮುಖ ಸುದ್ದಿ
ಕರ್ನಾಟಕದಲ್ಲಿ ಹಿಂದೂಗಳ ಹತ್ಯೆಯ ಹಿಂದೆ ಯಾವುದೋ ಒಂದು ನೆಟ್ ವರ್ಕ್ ಕೆಲಸ ಮಾಡುತ್ತಿದೆ : ಪ್ರತಾಪ್ ಸಿಂಹ
ರಾಜ್ಯ(ಹುಬ್ಬಳ್ಳಿ)ಆ.31:- ಕರ್ನಾಟಕದಲ್ಲಿ ಹಿಂದೂಗಳ ಹತ್ಯೆಯ ಹಿಂದೆ ಯಾವುದೋ ಒಂದು ನೆಟ್ ವರ್ಕ್ ಕೆಲಸ ಮಾಡುತ್ತಿದೆ. ಹಿಂದೂ ಕಾರ್ಯಕರ್ತರಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯಾದ್ಯಂತ ಪಿ.ಎಫ್.ಐ, ಕೆ.ಎಫ್.ಡಿ ಮತ್ತು ಎಸ್.ಡಿ.ಪಿ.ಐ ಯಂತಹ ದೇಶದ್ರೊಹಿ ಸಂಘಟನೆಗಳನ್ನು ನಿಷೇಧಿಸಬೇಕು ಹಾಗೂ ಸಚಿವ ರಮಾನಾಥ್ ರೈ ರಾಜಿನಾಮೆ ನೀಡುವಂತೆ ಒತ್ತಾಯಿಸಿದರು. ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ಹತ್ಯೆಗಳು ನಡೆಯುತ್ತಿವೆ. ಈ ಕುರಿತು ಜಾಗೃತಿ ಕಾರ್ಯಕ್ರಮ ವಾಗಿ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗುವುದು. ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದೇ ವೇಳೆಗೆ ಚಾಲನೆ ನೀಡಲಾಗುವುದು. 5ರಿಂದ 7ನೇ ತಾರೀಖಿನವರೆಗೆ ನಡೆಯಲಿದೆ. ಆಯ ಜಿಲ್ಲೆಯ ಬಿಜೆಪಿ ಮುಖಂಡರ ನೇತೃತ್ವದಲ್ಲಿ ರ್ಯಾಲಿಗೆ ಚಾಲನೆ ದೊರಕಲಿದೆ ಎಂದು ತಿಳಿಸಿದರು. (ಕೆ.ಎಸ್,ಎಸ್.ಎಚ್)