ಸುದ್ದಿ ಸಂಕ್ಷಿಪ್ತ

ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ

ಮಂಡ್ಯ, ಆ.31 : 2017ರ ಮಾರ್ಚ್ ಮತ್ತು ಏಪ್ರಿಲ್‍ನಲ್ಲಿ ನಡೆದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳಿಸಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 4 ಕೊನೆಯ ದಿನ.

ಹೆಚ್ಚಿನ ವಿವರಗಳಿಗೆ ಸಹಾಯವಾಣಿ ಸಂಖ್ಯೆ: 080-65970004 ಅಥವಾ ಇಲಾಖಾ ವೆಬ್‍ಸೈಟ್ www.backwardclasses.kar.nic.in ಅನ್ನು ನೋಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

-ಎನ್.ಬಿ.

Leave a Reply

comments

Related Articles

error: