ಕರ್ನಾಟಕಪ್ರಮುಖ ಸುದ್ದಿ

ಅಗತ್ಯವಿರುವಷ್ಟು ಪದವಿಪೂರ್ವ ಪಠ್ಯಪುಸ್ತಕ ಮುದ್ರಿಸಿ ಮಾರಲು ಕ್ರಮ : ತನ್ವೀರ್ ಸೇಠ್

ಬೆಂಗಳೂರು, ಆ. 31 : ಪದವಿಪೂರ್ವ ತರಗತಿಗಳ ಪಠ್ಯಪುಸ್ತಕಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಮುದ್ರಿಸಿ, ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಜೌಕಾಫ್ ಸಚಿವ ತನ್ವೀರ್ ಸೇಠ್ ಅವರು ತಿಳಿಸಿದ್ದಾರೆ.

ಕೆಲವು ಕಡೆಗಳಲ್ಲಿ ಕೊರತೆ ಉಂಟಾಗಿರುವ ಬಗ್ಗೆ ತಮ್ಮ ಗಮನಕ್ಕೆ ಬಂದಿದ್ದು, ಪಠ್ಯಪುಸ್ತಕಗಳ ಅಭಾವ ಇರುವ ಪ್ರದೇಶಗಳಿಗೆ ಪಠ್ಯಪುಸ್ತಕಗಳನ್ನು ಆದ್ಯತೆ ಮೇಲೆ ಒದಗಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು. ಸಮಸ್ಯೆಯ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

-ಎನ್.ಬಿ.

Leave a Reply

comments

Related Articles

error: