ಕರ್ನಾಟಕಪ್ರಮುಖ ಸುದ್ದಿ

ಅರಣ್ಯ ಸಹಾಯಾಧಿಕಾರಿಗಳ ನೇಮಕಾತಿ : ಸೆಪ್ಟೆಂಬರ್ 4ರಂದು ಮೂಲ ದಾಖಲೆಗಳ ಪರಿಶೀಲನೆ

ಬೆಂಗಳೂರು, ಸೆ.1 : ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ನೇಮಕಾತಿಯ ಸಂಬಂಧ 1:5ರ ಅನುಪಾತದಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ವಿವರಣಾ ಪಟ್ಟಿಯನ್ನು ಆಯೋಗದ ವೆಬ್‍ಸೈಟ್‍ನಲ್ಲಿ ಪ್ರಕಟಿಸಿದೆ.

ಅರಣ್ಯ ಇಲಾಖೆಯ ಪ್ರಧಾನ ಅರಣ್ಯ ಸಂರಕ್ಷಾಧಿಕಾರಿಗಳು ದೈಹಿಕ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆಯ ಪರೀಕ್ಷೆಯನ್ನು ನಡೆಸಿ, ವರದಿ ನೀಡಿರುವ ಆಧಾರದ ಮೇರೆಗೆ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯನ್ನು ಸೆ.4ರಂದು ನಡೆಸಲಾಗುತ್ತದೆ.

ಅರ್ಹ ಅಭ್ಯರ್ಥಿಗಳಿಗೆ ಸೂಚನಾಪತ್ರವನ್ನು ಪ್ರತ್ಯೇಕವಾಗಿ ರವಾನಿಸಲಾಗಿದೆ.  ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗಾಗಿ ಆಯೋಗದ ಕೇಂದ್ರ ಕಚೇರಿ, ಉದ್ಯೋಗಸೌಧ, ಬೆಂಗಳೂರು ಇಲ್ಲಿ ಸೂಚಿತ ದಿನಾಂಕ ಹಾಗೂ ಸಮಯದಂದು ತಪ್ಪದೇ ಹಾಜರಾಗಬೇಕು.

ಅರ್ಹ ಅಭ್ಯರ್ಥಿಗಳಿಗೆ ಸೂಚನಾ ಪತ್ರ ಸ್ವೀಕೃತವಾಗದಿದ್ದಲ್ಲಿ ಸಂಬಂಧಿತ ದಾಖಲೆಗಳೊಂದಿ ಕೇಂದ್ರ ಕಚೇರಿಯನ್ನು ಮೂಲ ದಾಖಲೆಗಳ ಪರಿಶೀಲನೆಗೆ ನಿಗದಿಪಡಿಸಿರುವ ದಿನಾಂಕದೊಳಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.

-ಎನ್.ಬಿ.

Leave a Reply

comments

Related Articles

error: