
ಕರ್ನಾಟಕ
ರೈತನ ಕತ್ತು ಕೊಯ್ದು ಕೊಲೆ
ಮಂಡ್ಯ.ಸೆಪ್ಟೆಂಬರ್.1: ರೈತನ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಚಿಕ್ಕತಿಮ್ಮಯ್ಯ ಎಂದು ಗುರುತಿಸಲಾಗಿದೆ. ಎಂದಿನಂತೆ ರಾತ್ರಿ ಜಮೀನಿನ ಬಳಿ ಕೆಲಸಕ್ಕೆ ಹೋಗಿದ್ದರು. ಆದರೆ ಮನೆಗೆ ವಾಪಸ್ ಬಂದಿರಲಿಲ್ಲ. ತಮ್ಮ ಮನೆಯವರು ಜಮೀನಿನ ಬಳಿ ಹೋಗಿ ಪರಿಶೀಲನೆ ನಡೆಸಿದಾಗ ರೈತ ಚಿಕ್ಕತಿಮ್ಮಯ್ಯ (45)ಅವರನ್ನ ಕತ್ತು ಕೊಯ್ದು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಕೊಲೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ( ವರದಿ; ಪಿ.ಜೆ )