ದೇಶಪ್ರಮುಖ ಸುದ್ದಿ

ಕೇಂದ್ರ ನೀತಿ ಆಯೋಗದ ಉಪಾಧ್ಯಕ್ಷರಾಗಿ ರಾಜೀವ್ ಕುಮಾರ್ ನೇಮಕ

ನವದೆಹಲಿ, ಸೆ.1 : ಕೇಂದ್ರ ನೀತಿ ಆಯೋಗದ ಉಪಾಧ್ಯಕ್ಷರಾಗಿ ಖ್ಯಾತ ಅರ್ಥಶಾಸ್ತ್ರಜ್ಞ ರಾಜೀವ್ ಕುಮಾರ್ ಇಂದು  ಅಧಿಕಾರ ಸ್ವೀಕರಿಸಿದರು.

ಭಾರತೀಯ-ಅಮೇರಿಕನ್ ಅರ್ಥಶಾಸ್ತ್ರಜ್ಞ ಅರವಿಂದ್ ಪಾನಗರಿಯಾ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ರಾಜೀವ್ ಕುಮಾರ್ ಅವರು ನೇಮಕಗೊಂಡಿದ್ದಾರೆ.  ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ನಲ್ಲಿ (ಸಿಪಿಆರ್) ಸೀನಿಯರ್ ಫೆಲೋ ಆಗಿರುವ ರಾಜೀವ್ ಕುಮಾರ್ ಅವರು ಲಖನೌ ವಿಶ್ವವಿದ್ಯಾನಿಲಯದಿಂದ ಪಿಎಚ್ ಡಿ ಪದವಿಯನ್ನು ಪಡೆದಿದ್ದಾರೆ. ಈ ಹಿಂದೆ, ಅವರು ಇಂಡಸ್ಟ್ರಿ ಅಸೋಸಿಯೇಷನ್ ಎಫ್ ಐಸಿಸಿಐನ ಕಾರ್ಯದರ್ಶಿ ಆಗಿ ಕಾರ್ಯನಿರ್ವಹಿಸಿದ್ದರು. ಜತೆಗೆ 2006 ರಿಂದ 2008ರ ವರೆಗೆ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ ಸದಸ್ಯರಾಗಿದ್ದರು. ರಾಜೀವ್  ಅವರು ಇಂಡಿಯನ್ ಇಂಡಸ್ಟ್ರೀಸ್ (ಸಿಐಐ) ನ ಮುಖ್ಯ ಅರ್ಥಶಾಸ್ತ್ರಜ್ಞರಾಗಿ ಸೇವೆ ಸಲ್ಲಿಸಿದ್ದರು ಮತ್ತು ಭಾರತೀಯ ಅಭಿವೃದ್ಧಿ ಇಲಾಖೆ, ಏಷ್ಯನ್ ಡೆವಲಪ್ ಮೆಂಟ್ ಬ್ಯಾಂಕ್, ಹಣಕಾಸು ಸಚಿವಾಲಯದಲ್ಲಿ ಸೇವೆ ಸಲ್ಲಿಸಿದ್ದಾರೆ. (ವರದಿ: ಎಲ್.ಜಿ)

Leave a Reply

comments

Related Articles

error: