ಮೈಸೂರು

ಸಿಎಂ ಸಿದ್ದರಾಮಯ್ಯ ಮಹಾರಾಜರನ್ನು ಏಕವಚನದಲ್ಲಿ ಸಂಬೋಧಿಸಿರುವುದು ಖಂಡನೀಯ : ಕ್ಷಮೆಯಾಚಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಸೆ.2:- ಮೈಸೂರು ಮಹಾನಗರ ಪಾಲಿಕೆಯ ಸದಸ್ಯರು ಮೈಸೂರು ಅಭಿವೃದ್ದಿಗೆ ಹೆಚ್ಚಿನ ಹಣ ಕೊಡಬೇಕು ಹಾಗೂ ದೇವರಾಜ ಮಾರುಕಟ್ಟೆಯ ವ್ಯಾಪಾರಸ್ಥರನ್ನು ತೆರವುಗೊಳಿಸಬಾರದು ನಾಲ್ವಡಿ ಕೃಷ್ಣ ರಾಜ ಒಡೆಯರ್ ಕಟ್ಟಿಸಿದ ಮಾರುಕಟ್ಟೆ ಎಂದು ಮನವಿ ಮಾಡಿದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು   ಮಹಾರಾಜರು ದೇವರಲ್ಲ, ಜನರ ಹಣದಿಂದ ಮಾರುಕಟ್ಟೆ ಕಟ್ಟಿಸಿದ್ದಾರೆ ಎಂದು ಹೇಳಿರುವುದನ್ನು ವಿರೋಧಿಸಿ ಹಾಗೂ ನಾಲ್ವಡಿ  ಕೃಷ್ಣರಾಜ ಒಡೆಯರ್ ಅವರನ್ನು ಏಕವಚನದಲ್ಲಿ ಸಂಬೋಧಿಸಿರುವುದನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರಿನ ಗಾಂಧಿ (ದೊಡ್ಡ ಗಡಿಯಾರದ ಹತ್ತಿರ ) ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಗಾಂಧೀಜಿಯವರ ಅನುಯಾಯಿಗಳು ಎಂದು ಹೇಳಿಕೊಳ್ಳುವ ರಾಜ್ಯದ ಮುಖ್ಯಮಂತ್ರಿಗಳು ಏಕವಚನದಲ್ಲಿ ರಾಜರನ್ನು ಸಂಬೋಧಿಸಿರುವುದು ದುರಹಂಕಾರದ ಪರಮಾವಧಿಯಾಗಿದೆ. ಒಂದು ಜವಾಬ್ದಾರಿಯುತ ಸ್ಥಾನದಲ್ಲಿದ್ದು ಸಾರ್ವಜನಿಕವಾಗಿ ಈ ರೀತಿ ಮಾತನಾಡುವುದು ಸರಿಯಲ್ಲ. ಮೈಸೂರಿನವರೇ ಆದ ಮುಖ್ಯಮಂತ್ರಿಗಳು ಮೈಸೂರಿನ ಮಹಾರಾಜರ ಕುರಿತು ಈ ರೀತಿ ಮಾತನಾಡಿರುವುದು ಖಂಡನೀಯ. ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮೋರ್ಚಾ ಅಧ್ಯಕ್ಷ ಕೆ.ಗೋವರ್ಧನ್, ನಗರಾಧ್ಯಕ್ಷ ಡಾ.ಬಿ.ಮಂಜುನಾಥ್, ಸಂಪತ್ ಬಿ, ಕೆ.ದೇವರಾಜ್, ಸೋಮಶೇಖರ್ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: