ಸುದ್ದಿ ಸಂಕ್ಷಿಪ್ತ

ಸೆ.10 ರಂದು ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ

ಮಡಿಕೇರಿ ಸೆ.2 : ಕೊಡಗು ಜಿಲ್ಲಾ ಪತ್ರಕರ್ತರ ಸಂಘವು ಕೊಡಗು ಪ್ರೆಸ್ ಕ್ಲಬ್ ಸಹಯೋಗದಲ್ಲಿ ಸೆ.10 ರಂದು ಆರ್ಜಿ ಗ್ರಾಮದ ಬಲ್ಲಚಂಡ ರಂಜನ್ ಬಿದ್ದಪ್ಪ ಅವರ ಗದ್ದೆಯಲ್ಲಿ ಪತ್ರಕರ್ತರ ಜಿಲ್ಲಾ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಆಯೋಜಿಸಿದೆ.

ಕೆಸರುಗದ್ದೆಯಲ್ಲಿ ಹ್ಯಾಂಡ್ ಬಾಲ್, ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದ್ದು, ಒಂದು ತಂಡದಲ್ಲಿ ಏಳು ಪತ್ರಕರ್ತರಿರಬೇಕು. ಜಿಲ್ಲೆಯ ಪತ್ರಕರ್ತರು ಏಳು ಜನರ ತಂಡ ರಚಿಸಿಕೊಂಡು ಸ್ಪರ್ಧೆಯಲ್ಲಿ ಮುಕ್ತ ವಾಗಿ ಭಾಗವಹಿಸಬಹುದಾಗಿದೆ. 40 ವರ್ಷದೊಳಗಿನ ಹಾಗೂ 40 ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಪ್ರತ್ಯೇಕವಾಗಿ ಪತ್ರಕರ್ತರಿಗೆ ಕೆಸರುಗದ್ದೆ ಓಟದ ಸ್ಪರ್ಧೆ ನಡೆಯಲಿದೆ. ಸ್ಪರ್ಧಿಸಲು ಸೆ.7 ರೊಳಗೆ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ ಸಂಚಾಲಕ ಪಳೆಯಂಡ ಪಾರ್ಥ ಚಿಣ್ಣಪ್ಪ (9448648225) ಅವರಲ್ಲಿ ಹೆಸರು ನೋಂದಾಯಿಸಿಕೊಳ್ಳ ಬೇಕೆಂದು ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಪ್ರಧಾನ ಕುಡೆಕಲ್ ಸಂತೋಷ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

 

Leave a Reply

comments

Related Articles

error: