ಮೈಸೂರು

ರಾಜೀವ್ ಸ್ನೇಹ ಬಳಗದಿಂದ `ಸಹಸ್ರ ಜನ ಸಹಸ್ರ ಗಿಡ’ ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು,ಸೆ.2-ಸ್ವಚ್ಛತೆಯ ಕಾರ್ಯದಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುತ್ತಿದ್ದ ಎಚ್.ವಿ.ರಾಜೀವ್ ಸ್ನೇಹ ಬಳಗದ ತಂಡ ಈಗ ಪರಿಸರ ಸಂರಕ್ಷಣೆಯ ಕಡೆ ಅರಿವು ಮೂಡಿಸಲು ಮುಂದಾಗಿದ್ದಾರೆ. ಅದರಂತೆ ಶನಿವಾರ ರಾಜೀವ್ ಸ್ನೇಹ ಬಳಗದ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಶ್ರೀನಗರ ಬಡಾವಣೆಯಲ್ಲಿ ಒಂದು ಸಾವಿರ ಗಿಡಗಳನ್ನು ನೆಡಲಾಯಿತು.

ಶ್ರೀ ನಗರದ ಬಡಾವಣೆಯಲ್ಲಿ ಆಯೋಜಿಸಿದ್ದ `ಸಹಸ್ರ ಜನ ಸಹಸ್ರ ಗಿಡ’ ಎಂಬ ವಿನೂತನ ಕಾರ್ಯಕ್ರಮಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಸಿ ನೆಟ್ಟು ಸಸಿಗೆ ನೀರು ಹಾಕಿ ಚಾಲನೆ ನೀಡಿದರು. ನಂತರ 1521 ಜನ 1521 ಸಸಿಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಬಳಗದ ವಾರಾಂತ್ಯದ 180ನೇ ಸ್ವಚ್ಛಭಾರತ ಅಭಿಯಾನದ ಅಂಗವಾಗಿ ಬಡಾವಣೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಲಾಯಿತು. 

ಕಾರ್ಯಕ್ರಮದಲ್ಲಿ ಪತ್ರಕರ್ತ ಕೆ.ಬಿ.ಗಣಪತಿ, ಬಿಜೆಪಿ ಮುಖಂಡ ಎಚ್.ವಿ.ರಾಜೀವ್, ನ್ಯಾಯಧೀಶ ಆರ್.ಹರೀಶ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯನಿರ್ವಾಹಕ ತಿಪ್ಪೇಸ್ವಾಮಿ, ಗಣಪತಿ ಹೆಗಡೆ, ಹರಿ, ಭವಾನಿ ಶಂಕರ್, ಎನ್.ಆರ್.ಮಂಜುನಾಥ್ ಇತರರು ಉಪಸ್ಥಿತರಿದ್ದರು. (ವರದಿ-ಎಚ್.ಎನ್, ಎಂ.ಎನ್)

Leave a Reply

comments

Related Articles

error: