ಮೈಸೂರು

ಚಾಮುಂಡಿ ಬೆಟ್ಟದಲ್ಲಿ ಭಕ್ತರ ಹಣ ಕದಿಯುತ್ತಿದ್ದ ಇಬ್ಬರ ಬಂಧನ

ಮೈಸೂರು, ಸೆ.೨: ಚಾಮುಂಡಿ ಬೆಟ್ಟದಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಹಣ ಕದಿಯುತ್ತಿದ್ದ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ.
ನಂಜಮ್ಮ, ಸೌಮ್ಯರೇಖಾ ಬಂಧಿತ ಆರೋಪಿಗಳು. ಕೃಷ್ಣರಾಜ ಪೊಲೀಸರು ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಪರ್ಸ್ ಮತ್ತು ಹಣ ಕಳ್ಳತನವಾಗುತ್ತಿದ್ದ ಹಿನ್ನೆಲೆಯಲ್ಲಿ ಪ್ರಕರಣಗಳ ಪತ್ತೆ ಸಂಬಂಧ ದೇವಸ್ಥಾನದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರವನ್ನು ಪರಿಶೀಲಿಸಿ ಈ ಪ್ರಕರಣಗಳಲ್ಲಿ ಮಹಿಳೆಯರ ಕೈವಾಡವಿರುವುದನ್ನು ದೃಢಪಡಿಸಿಕೊಂಡು ಸಿ.ಸಿ ಕ್ಯಾಮರಾದಲ್ಲಿ ಆರೋಪಿಗಳ ಚರಹೆ ಗುರ್ತಿಸಿದ್ದು, ಇವರ ಪತ್ತೆಗಾಗಿ ಚಾಮುಂಡಿ ಬೆಟ್ಟದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಕ ಮಾಡಿದ್ದರು.
ಈ ಚಹರೆಯುಳ್ಳ ಮಹಿಳಾ ಆರೋಪಿಗಳು ಮತ್ತೆ ಕಳ್ಳತನ ಮಾಡಲು ಚಾಮುಂಡಿ ಬೆಟ್ಟಕ್ಕೆ ಬಂದಿದ್ದ ವೇಳೆ ವಶಕ್ಕೆ ಪಡೆದು ವಿಚಾರ ಮಾಡಲಾಗಿ ಬೆಟ್ಟದಲ್ಲಿ ಜನಸಂದಣಿ ಹೆಚ್ಚಿದ್ದಾಗ ಮಹಿಳಾ ಭಕ್ತರ ವ್ಯಾನಿಟಿ ಬ್ಯಾಗ್‌ನಿಂದ ಹಣ ಕಳ್ಳತನ ಮಾಡುತ್ತಿದ್ದ ಬಗ್ಗೆ ಒಪ್ಪಿಕೊಂಡ ಮೇರೆಗೆ ಆರೋಪಿಗಳಿಂದ ಕೃಷ್ಣರಾಜ ಪೊಲೀಸ್ ಠಾಣೆಯ ೨ ಪ್ರಕರಣಗಳಿಗೆ ಸಂಬಂಧಪಟ್ಟಂತೆ ೨ ಸಾವಿರ ನಗದನ್ನು ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ಹಣವನ್ನು ಆರೋಪಿಗಳು ಖರ್ಚು ಮಾಡಿಕೊಂಡಿರುವುದು ವಿಚಾರಣೆಯಿಂದ ತಿಳಿದು ಬಂದಿದೆ. (ವರದಿ ಬಿ.ಎಂ)

Leave a Reply

comments

Related Articles

error: