ಸುದ್ದಿ ಸಂಕ್ಷಿಪ್ತ

ಸೆ.14 ರಂದು ಅಪ್ರೆಂಟಿಸ್ ಶಿಪ್ ಮೇಳ

ಮೈಸೂರು,ಸೆ.4 : ಚೆನ್ನೈನ (ಸದರನ್ ರೀಜನ್) ಬೋರ್ಡ್ ಆಫ್ ಅಪ್ರೆಂಟಿಸ್ ಶಿಪ್ ಟ್ರೈನಿಂಗ್ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸೆ.14ರ ಬೆಳಗ್ಗೆ 10 ಗಂಟೆಯಿಂದ ಮೈಸೂರಿನ ಸರ್ಕಾರಿ ಸಿಪಿಸಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಅಪ್ರೆಂಟಿಸ್ ಶಿಪ್ ಮೇಳ ಆಯೋಜಿಸಿದೆ.

ಡಿಪ್ಲೋಮೊ, ಇಂಜಿನಿಯರಿಂಗ್ ಪದವಿ ಪಡೆದ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದು ಎಂದು ತಾಂತ್ರಿಕ ಶಿಕ್ಷಣ ಇಲಾಖೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: