ಸುದ್ದಿ ಸಂಕ್ಷಿಪ್ತ

ನೂತನ ಒಕ್ಕಲಿಗರ ವಿದ್ಯಾರ್ಥಿನಿ ನಿಲಯದ ಉದ್ಘಾಟನೆ ಸೆ.6ಕ್ಕೆ

ಮೈಸೂರು,ಸೆ.5 : ರಾಜ್ಯ ಒಕ್ಕಲಿಗರ ಸಂಘದಿಂದ ವಿಜಯನಗರದ 1ನೇ ಹಂತದಲ್ಲಿ ನಿರ್ಮಿಸಲಾಗಿರುವ ವಿದ್ಯಾರ್ಥಿನಿಯರ ಉಚಿತ ವಸತಿ ನಿಲಯದ ಉದ್ಘಾಟನಾ ಸಮಾರಂಭವನ್ನು ಸೆ.6ರ ಬೆಳಗ್ಗೆ 10.30ಕ್ಕೆ ಆಯೋಜಿಸಿದೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಉದ್ಘಾಟಿಸುವರು, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಎನ್.ಬೆಟ್ಟೇಗೌಡ ಅಧ್ಯಕ್ಷತೆ ವಹಿಸುವರು, ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಆರ್.ಅಶೋಕ್ , ಮೇಯರ್ ಎಂ.ಜೆ.ರವಿಕುಮಾರ್ ಸೇರಿದಂತೆ ಹಲವಾರು ಜನಪ್ರತಿನಿಧಿಗಳು ಭಾಗವಹಿಸುವರು.

ಆದಿಚುಂಚನಗಿರಿ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದ ಸ್ವಾಮೀಜಿ, ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀಚಂದ್ರಶೇಖರನಂದನಾಥ ಸ್ವಾಮೀಜಿ, ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಸಂಸ್ಥಾನ ಮಠದ ಶ್ರೀಗಳಾದ ನಂಜಾವಧೂತ ಸ್ವಾಮೀಜಿಗಳು ಸಾನಿಧ್ಯ ವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: