ಸುದ್ದಿ ಸಂಕ್ಷಿಪ್ತ

ಕಾಂಗ್ರೆಸ್‍ನಲ್ಲಿ ಸ್ಲಂ ಮೋರ್ಚಾ ಆರಂಭಿಸುವಂತೆ ಮನವಿ

ಕಾಂಗ್ರೆಸ್ ಪಕ್ಷದಲ್ಲಿ ಸ್ಲಂ ಮೋರ್ಚಾ ಆರಂಭಿಸುವಂತೆ ಮೈಸೂರು ಜಿಲ್ಲಾ ಕಾಂಗ್ರೆಸ್‍ ಸಮಿತಿ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ವತಿಯಿಂದ ಮನವಿ ಮಾಡಲಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಡಿ ಒತ್ತಾಯಿಸಿರುವ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾನೂನು ಮತ್ತು ಮಾನವಹಕ್ಕು ವಿಭಾಗದ ಹೆಚ್ಚುವರಿ ಕಾರ್ಯದರ್ಶಿ ಮೊಹಮ್ಮದ್ ಅಲಿ, ಅಲ್ಪಸಂಖ್ಯಾತ ವಿಭಾಗದ ಮಾಜಿ ಮಾಧ್ಯಮ ಕಾರ್ಯದರ್ಶಿ ಮಿರ್ಜಾ ಜಮ್ಷೇಡ್ ಬೇಗ್ ಅಶ್ರಫಿ ಅವರು ಜಂಟಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ್, ದಿನೇಶ್ ಗುಂಡೂರಾವ್ ಅವರಲ್ಲಿಯೂ ಈ ಒತ್ತಾಯ ಮಾಡಿದ್ದು, ಇತರೆ ರಾಷ್ಟ್ರೀಯ ಪಕ್ಷಗಳಲ್ಲಿ ಈಗಾಗಲೇ ಸ್ಲಂ ಮೋರ್ಚಾ ಅಸ್ತಿತ್ವದಲ್ಲಿವೆ. ಹಾಗಾಗಿ ಕಾಂಗ್ರೆಸ್ ಪಕ್ಷದಲ್ಲೂ ಸ್ಲಂ ಮೋರ್ಚಾ ಆರಂಭಿಸಿದರೆ ಮುಮಬರುವ ಚುನಾವಣೆಗಳಲ್ಲಿ ಪಕ್ಷಕ್ಕೆ ಬಲ ಬರಲಿದೆ ಎಂದು ಒತ್ತಾಯಿಸಿದ್ದಾರೆ.

Leave a Reply

comments

Related Articles

error: