ಮೈಸೂರು

ಬಿಜೆಪಿಯತ್ತ ಒಲವು ತೋರುತ್ತಿರುವ ಶ್ರೀನಿವಾಸ್ ಪ್ರಸಾದ್

ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಸದ್ಯದಲ್ಲಿಯೇ ತಮ್ಮ ಮುಂದಿನ ರಾಜಕೀಯ ನಡೆಯನ್ನು ಅವರ ಅಭಿಮಾನಿಗಳು ಮತ್ತು ಬೆಂಬಲಿಗರೊಂದಿಗೆ ಚರ್ಚಿಸಿ ಕೈಗೊಳ್ಳಲಿದ್ದಾರೆ.

ಈಗಾಗಲೇ ಬಿಜೆಪಿಯ ಪ್ರಮುಖ ನಾಯಕರಾದ ಎಲ್.ಕೆ.ಆಡ್ವಾನಿ, ಅಮಿತ್ ಶಾ, ಗೃಹ ಸಚಿವ ರಾಜನಾಥ್ ಸಿಂಗ್ ಅವರು ಶ್ರೀನಿವಾಸ ಪ್ರಸಾದ್ ಅವರನ್ನು ದೂರವಾಣಿಯ ಮೂಲಕ ಸಂಪರ್ಕಿಸಿದ್ದು, ಬಿಜೆಪಿಗೆ ಬರುವಂತೆ ಮನವೊಲಿಸುತ್ತಿದ್ದಾರೆ ಎನ್ನಲಾಗಿದೆ. ರಾಜನಾಥ್ ಸಿಂಗ್ ಪ್ರಸಾದ್ ಅವರನ್ನು ಬಿಜೆಪಿ ಸೇರುವಂತೆ ಒತ್ತಾಯಿಸಿದ್ದು, ಬಿಜೆಪಿ ಮುಖಂಡರನ್ನು ಅವರ ಬಳಿ ಕಳುಹಿಸಿ ಆಮಂತ್ರಣ ನೀಡಿದ್ದಾರೆ.

ಬಿಜೆಪಿ ಅಷ್ಟೇ ಅಲ್ಲ ಜೆಡಿಎಸ್ ಸಹ ಶ್ರೀನಿವಾಸ್ ಪ್ರಸಾದ್ ಅವರನ್ನು ಪಕ್ಷಕ್ಕೆ ಆಹ್ವಾನಿಸಿದೆ. ಪ್ರಸಾದ್ ಅವರು ಬಿಜೆಪಿ ಮುಖಂಡರ ಜೊತೆ ಮಾತುಕತೆ ನಡೆಸಿದ್ದು, ಬಿಜೆಪಿಯತ್ತ ಒಲವು ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೀಪಾವಳಿಯ ನಂತರ ಬೆಂಬಲಿಗರೊಂದಿಗೆ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಆಪ್ತವಲಯದಲ್ಲಿ ಕೇಳಿ ಬರುತ್ತಿದೆ.

Leave a Reply

comments

Related Articles

error: