ಪ್ರಮುಖ ಸುದ್ದಿಮೈಸೂರು

ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ನೀರಿನ ಕೊರತೆ, ಬರಗಾಲ ಮತ್ತು ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳು ಕೆಡಿಪಿ ಪ್ರಾಥಮಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರತಿಧ್ವನಿಸಿದವು.

ನ.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕೆಡಿಪಿ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬುಧವಾರ ಪ್ರಾಥಮಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಪಿಡಬ್ಲ್ಯುಡಿ ಪ್ರಧಾನ ಕಾರ್ಯದರ್ಶಿ ಎಂ. ಲಕ್ಷ್ಮೀನಾರಾಯಣ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಆ ಪ್ರದೇಶದ ಸಂಬಂಧಪಟ್ಟ ಇಲಾಖೆಗಳಿಂದ ವರದಿಗಳನ್ನು ತರಿಸಿಕೊಂಡರು. ಜಿಲ್ಲಾಧಿಕಾರಿ ಡಿ. ರಂದೀಪ್ ಅವರು ಮಳೆ, ನೀರಿನ ಮಟ್ಟ, ಬರಗಾಲ, ಬೆಳೆ ನಾಶ, ರೈತರ ಆತ್ಮಹತ್ಯೆ ಮತ್ತು ಇತರ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.

ಈ ವರ್ಷ ಏಪ್ರಿಲ್‍ನಿಂದ ಸೆಪ್ಟೆಂಬರ್‍ವರೆಗೆ 383.4 ಮಿಮೀ ಮಳೆ ಆಗಿದೆ. 585.1 ಮಿಮೀ ಮಳೆ ಆಗುವ ನಿರೀಕ್ಷೆಯಿತ್ತು. ಮೈಸೂರಿನ 7 ತಾಲೂಕನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಈ ಪ್ರದೇಶದ ಹಲವೆಡೆ ಕುಡಿಯುವ ನೀರಿನ ಸಮಸ್ಯೆಯಿದೆ ಎಂದು ಜಿಲ್ಲಾಧಿಕಾರಿ ರಂದೀಪ್ ಹೇಳಿದರು.

ಬಾಕಿ ಉಳಿದಿರುವ ಯೋಜನೆಗಳು, ಯೋಜನೆ ಮಂಜೂರಿಗೆ ಬೇಕಾಗಿರುವ ಅನುದಾನದ ಬಗ್ಗೆ ಪ್ರಧಾನ ಕಾರ್ಯದರ್ಶಿಗೆ ಮಾಹಿತಿ ನೀಡಲಾಯಿತು.

ಜಿಲ್ಲಾ ಪಂಚಾಯಿತಿ ಸಿಇಒ ಶಿವಶಂಕರ್, ಎಡಿಸಿ ವೆಂಕಟೇಶ್ ಮತ್ತು ಇತರರು ಉಪಸ್ಥಿತರಿದ್ದರು.

Leave a Reply

comments

Related Articles

error: