ಕರ್ನಾಟಕ

ಗೌರಿ ಗಣೇಶ ಮೂರ್ತಿ ವಿಸರ್ಜನೆ

ರಾಜ್ಯ(ಮಡಿಕೇರಿ)ಸೆ.5:- ಸೋಮವಾರಪೇಟೆ ಪಟ್ಟಣದ ಸುತ್ತಮುತ್ತಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಮೂರ್ತಿಗಳನ್ನು ಸಮೀಪದ ಆನೆಕೆರೆಯಲ್ಲಿ ವಿಸರ್ಜಿಸಲಾಯಿತು.

ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಿದ್ದ ಗೌರಿ ಗಣೇಶ ಮೂರ್ತಿಗಳ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ಭಕ್ತಾದಿಗಳು ದಾರಿಯುದ್ದಕ್ಕೂ ಕುಣಿದು ಕುಪ್ಪಳಿಸಿದರು.

ಅಲೇಕಟ್ಟೆ ರಸ್ತೆ, ಬಸವೇಶ್ವರ ದೇವಾಲಯ, ಕಟ್ಟೆಬಸವೇಶ್ವರ, ಕಕ್ಕೆಹೊಳೆ, ಸೋಮೇಶ್ವರ ದೇವಾಲಯ, ಪೌರ ಕಾರ್ಮಿಕರ ಕಾಲನಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಮೂರ್ತಿಗಳನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ವಿಸರ್ಜಿಸಲಾಯಿತು. ರಾತ್ರಿ ಮೆರವಣಿಗೆಯ ಸಂದರ್ಭ ಪಟ್ಟಣದ ಪೊಲೀಸರು ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು. ಡಿವೈಎಸ್‍ಪಿ ಸಂಪತ್ ಕುಮಾರ್, ವೃತ್ತನಿರೀಕ್ಷಕ ಪರಶಿವಮೂರ್ತಿ, ಠಾಣಾಧಿಕಾರಿ ಶಿವಣ್ಣ ಮತ್ತು ಸಿಬ್ಬಂದಿಗಳು ಕಾರ್ಯನಿರ್ವಹಿಸಿದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: