ಕರ್ನಾಟಕಪ್ರಮುಖ ಸುದ್ದಿ

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನ : ಅರ್ಜಿ ಆಹ್ವಾನ

ಮಂಡ್ಯ, ಸೆ.6 : ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ರೈತರಿಗೆ ತೋಟಗಾರಿಕೆ ಬೆಳೆಗಳು ಮತ್ತು ಬೆಳೆಗಳ ಅಂತರಕ್ಕೆ ಅನುಗುಣವಾಗಿ ಪರಿಶಿಷ್ಟ ಜಾತಿ, ಪಂಗಡದ ರೈತರಿಗೆ ಸಹಾಯಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಕೇಂದ್ರದ ತೋಟಗಾರಿಕೆ ಅಧಿಕಾರಿಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಿಸಿದ ತಾಲ್ಲೂಕು ತೋಟಗಾರಿಕೆ ಕಛೇರಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ಮಂಡ್ಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕರು ದೂ.ಸಂಖ್ಯೆ: 08232-225735, ಮದ್ದೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕರು ದೂ.ಸಂಖ್ಯೆ:08232-233450, ಕೆ.ಆರ್.ಪೇಟೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕರು ದೂ.ಸಂಖ್ಯೆ: 08237-262540, ನಾಗಮಂಗಲ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕರು ದೂ.ಸಂಖ್ಯೆ:08234-286160, ಪಾಂಡವಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕರು ದೂ.ಸಂಖ್ಯೆ: 08236-255055, ಮಳವಳ್ಳಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕರು ದೂ.ಸಂಖ್ಯೆ: 08230-242301, ಶ್ರೀರಂಗಪಟ್ಟಣ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕರು ದೂ.ಸಂಖ್ಯೆ: 08236-253205 ನ್ನು ಸಂಪರ್ಕಿಸಲು ಕೋರಿದೆ.

-ಎನ್.ಬಿ.

Leave a Reply

comments

Related Articles

error: