ದೇಶಪ್ರಮುಖ ಸುದ್ದಿ

ಗೋ ರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಿ: ಸುಪ್ರೀಂ ಕೋರ್ಟ್

ನವದೆಹಲಿ,ಸೆ.6-ಗೋರಕ್ಷಣೆಯ ಹೆಸರಿನಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಹಿಂಸಾಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ ಅಂತಹವರ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಸ್ವಯಂಘೋಷಿತ ಗೋರಕ್ಷಕರ ಅಟ್ಟಹಾಸ ತಡೆಯಲು ಪ್ರತಿ ಜಿಲ್ಲೆಯಲ್ಲೂ ಹಿರಿಯ ಪೊಲೀಸ್ ಅಧಿಕಾರಿಯನ್ನು ನೋಡೆಲ್ ಅಧಿಕಾರಿಯಾಗಿ ನೇಮಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಗೋರಕ್ಷಣೆ ಹೆಸರಿನಲ್ಲಿ ನಡೆಯುವ ಹಿಂಸಾಚಾರವನ್ನು ಕೇವಲ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯೆಂದು ಹೇಳಿ ಸರ್ಕಾರಗಳು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲವೆಂದು ಅರ್ಜಿದಾರರ ಪರ ವಕೀಲರು ವಾದಿಸಿದರು.

ಗೋರಕ್ಷಣೆಯ ನೆಪದಲ್ಲಿ ಜನರು ಕಾನೂನನ್ನು ಕೈಗೆತ್ತಿಕೊಳ್ಳುವ ಚಾಳಿಯನ್ನು ತಡೆಯಲು ಸರ್ಕಾರಗಳು ಏನು ಕ್ರಮ ಕೈಗೊಂಡಿವೆ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್ ಅಂತಹವರ ವಿರುದ್ಧ ಕೂಡಲೇ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. ಅಲ್ಲದೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರೊಂದಿಗೆ ಸಮಾಲೋಚಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದೆ. (ವರದಿ-ಎಂ.ಎನ್)

Leave a Reply

comments

Related Articles

error: