ಸುದ್ದಿ ಸಂಕ್ಷಿಪ್ತ

ಅಂತರ ಕಾನೂನು ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

ಮೈಸೂರು,ಸೆ.6 : ಜೆ.ಎಸ್.ಎಸ್. ಕಾನೂನು ಕಾಲೇಜು, ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಅಂತರ ಕಾನೂನು ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಮಾನಸ ಗಂಗೋತ್ರಿಯ ಒಳಾಂಗಣ ಕ್ರೀಡಾಂಗಣದಲ್ಲಿ ಸೆ.7ರಂದು ಆಯೋಜಿಸಿದೆ.

ಬೆಳಗ್ಗೆ 10 ಗಂಟೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಚನ್ನಣ್ಣನವರು ಉದ್ಘಾಟಿಸುವರು, ಕಾಲೇಜಿನ ಮುಖ್ಯಸ್ಥ ಪ್ರೊ.ಕೆ.ಎಸ್.ಸುರೇಶ್ ಅಧ್ಯಕ್ಷತೆ ವಹಿಸುವರು. ಜೆ.ಡಿಎಸ್ ಮುಖಂಡ ಹರೀಶ್ ಗೌಡ, ಕರ್ನಾಟಕ ರಾಜ್ಯ ಕಾನೂನು ವಿವಿಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಖಲೀದ್ ಖಾನ್ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗುವರು. (ಕೆ.ಎಂ.ಆರ್)

Leave a Reply

comments

Related Articles

error: