ಪ್ರಮುಖ ಸುದ್ದಿ

ಗೌರಿ ಲಂಕೇಶ್ ಹತ್ಯೆ ಖಂಡಿಸಿ ಪತ್ರಕರ್ತರ ಧರಣಿ 

ಪ್ರಮುಖ ಸುದ್ದಿ, ಹುಣಸೂರು, ಸೆ.೭: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಹುಣಸೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತಾಲೂಕು ಕಚೇರಿ ಆವರಣದಲ್ಲಿ ಸಾಂಕೇತಿಕ ಧರಣಿ ನಡೆಸಿ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಬೇಕೆಂದು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಪತ್ರಕರ್ತರ ಸಂಘದ ಹಿರಿಯರಾದ ಹನಗೂಡು ನಟರಾಜ್ ಮಾತನಾಡಿ, ಇದೊಂದು ದುರಂತ ಘಟನೆ. ಈ ರೀತಿಯ ಹತ್ಯೆಗಳು ನಡೆಯಬಾರದು. ರಾಜಕೀಯ ಹಾಗೂ ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ಏನೇ ಇದ್ದರೂ ಅದನ್ನು ಚರ್ಚೆಯಲ್ಲಿ ವ್ಯಕ್ತಪಡಿಸಬೇಕು. ಆದರೆ ಈ ರೀತಿಯ ಹತ್ಯೆ ಮಾಡಲು ಯಾರು ಮುಂದಾಗಬಾರದು. ಇದು  ಸಮಾಜ ತಲೆತಗ್ಗಿಸುವಂತಹ ಕೆಲಸ. ಹತ್ಯೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಧರಣಿಯಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸದಸ್ಯರುಗಳು ಭಾಗವಹಿಸಿದ್ದರು. (ವರದಿ ಬಿ.ಎಂ)

 

Leave a Reply

comments

Related Articles

error: