ಮೈಸೂರು

ಹುಣಸೂರು ನಗರದ ಪ್ರಮುಖ ಸ್ತಳಗಳಲ್ಲಿ ಹೈಟೆಕ್ ಶೌಚಾಲಯವಿಲ್ಲ : ನಿರ್ಮಿಸಲು ಸತ್ಯಪ್ಪ ಒತ್ತಾಯ

ಮೈಸೂರು,ಸೆ.7:- ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ ಕರ್ಮಭೂಮಿ ಹುಣಸೂರು ನಗರದ ಪ್ರಮುಖ ಸ್ಥಳಗಳಲ್ಲಿ ಹೈಟೆಕ್ ಶೌಚಾಲಯ ಮತ್ತು ಕುಡಿಯವ ನೀರು ಇಲ್ಲದಿರುವುದು ಈ ಕ್ಷೇತ್ರದ ದುರಂತ ಎಂದು ಸತ್ಯ ಎಂ.ಎ.ಎಸ್.ಪೌಂಡೇಶನ್ ಅಧ್ಯಕ್ಷ ಸತ್ಯಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಹುಣಸೂರು ನಗರದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹುಣಸೂರು ನಗರಸಭಾ ವ್ಯಾಪ್ತಿಯಲ್ಲಿ 70 ರಿಂದ 80 ಸಾವಿರ ಜನಸಂಖ್ಯೆಯಿದ್ದು, ನಗರಸಭೆಯಾಗಿ ಈಗಾಗಲೇ ಒಂದು ವರ್ಷ ಕಳೆದಿದೆ. ಜನನಿಬಿಡ ಪ್ರದೇಶದಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳಾದ ಹೈಟೆಕ್ ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯಾಗದಿರುವ ಬಗ್ಗೆ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತದೆ ಎಂದು ಸುದ್ದಿಗೋಷ್ಟಿಯಲ್ಲಿ ಕಿಡಿಕಾರಿದರು.
ಕೇಂದ್ರ ಸ್ಥಾನಗಳಲ್ಲಿ ಶುದ್ಧ ಕುಡಿಯುವ ನೀರು ಮತ್ತು ಶೌಚಾಲಯಗಳು ನಿರ್ಮಾಣವಾಗಿಲ್ಲ. ಈ ಕುರಿತು ಸತ್ಯ ಎಂ.ಎ.ಎಸ್ ಫೌಂಡೇಶನ್ ವತಿಯಿಂದ ಜನವರಿ 11 , ಮೇ 6ರಂದು  ಪ್ರತಿಭಟನೆಗಳನ್ನು ಮಾಡಿ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಿಗೆ ಮನವಿ ಸಲ್ಲಿಸಿದ್ದರೂ ಇದುವರೆಗೂ ಯಾವುದೆ ಪ್ರಯೋಜನ ವಾಗಿಲ್ಲವೆಂದರು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕೂಡಲೆ ನಗರ ಪ್ರದೇಶ ಹಾಗೂ ಹೋಬಳಿ ಕೇಂದ್ರಗಳಲ್ಲಿ ಹೈಟೆಕ್ ಶೌಚಾಲಯ ನಿರ್ಮಿಸಿ ಸ್ಪಂದಿಸದಿದ್ದರೆ ನ್ಯಾಯಾಲಯದ ಮೊರೆ ಹೋಗುತ್ತೇನೆಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ವರದರಾಜ್, ರವಿಕುಮಾರ್ ಬಸಪ್ಪ, ಶ್ರೀಧರ್, ಪವನ್ ಕುಮಾರ್  ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: