
ಕರ್ನಾಟಕಪ್ರಮುಖ ಸುದ್ದಿ
ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಆಧಾರದಲ್ಲಿ ಖಾಸಗಿಯವರಿಗೆ ವಹಿಸಲು ನಿರ್ಧಾರ : ಸಿಎಂ ಸಿದ್ದರಾಮಯ್ಯ
ರಾಜ್ಯ(ಬೆಂಗಳೂರು)ಸೆ.7:- ಮೈಸೂರಿನ ಕೆ.ಆರ್ ನಗರದಲ್ಲಿರುವ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಆಧಾರದಲ್ಲಿ ಖಾಸಗಿಯವರಿಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಚಿವರಾದ ಗೀತಾ ಮಹದೇವ ಪ್ರಸಾದ್, ಶಾಸಕರಾದ ಪುಟ್ಟಣ್ಣಯ್ಯ, ಸಾ.ರಾ.ಮಹೇಶ್, ರಮೇಶ್ ಬಂಡಿಸಿದ್ದೇಗೌಡ ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಕಬ್ಬು ಬಾಕಿ 6.77 ಕೋಟಿ ರೂ. ಬಿಡುಗಡೆಗೆ ಸೂಚನೆ ನೀಡಿ, ಕಬ್ಬು ಅರೆಯುವಿಕೆ ಆರಂಭಿಸಲು 2 ಕೋಟಿ ನೀಡಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಇನ್ನು ಮೈಸೂರು ಜಿಲ್ಲೆಯ ಕೆ.ಆರ್.ನಗರದ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಆಧಾರದ ಮೇಲೆ ಖಾಸಗಿಯವರಿಗೆ ವಹಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಒಂದು ಹಂತದ ಇತ್ಯರ್ಥವಾಗಿ ಕಾರ್ಮಿಕರಿಗೆ 14 ಕೋಟಿ ನೀಡಲು ತೀರ್ಮಾನಿಸಿದ್ದು, ಕಾರ್ಖಾನೆಯನ್ನು ಗುತ್ತಿಗೆ ಆಧಾರದ ಮೇಲೆ ಖಾಸಗಿಯವರಿಗೆ ವಹಿಸಲು ಕೂಡಲೇ ಟೆಂಡರ್ ಕರೆಯಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸಂಕಷ್ಟದಲ್ಲಿರುವ ಕಾರ್ಖಾನೆ ಕಾರ್ಮಿಕರಿಗೆ ರಕ್ಷಣೆ ಒದಗಿಸಬೇಕಿದೆ. ಹೀಗಾಗಿ 154 ಕಾರ್ಮಿಕರಿಗೆ ಒಂದು ಹಂತದ ಇತ್ಯರ್ಥವಾಗಿ ಹಣ ನೀಡಲು ಸಿಎಂ ಆದೇಶಿಸಿದ್ದಾರೆ. (ಕೆ.ಎಸ್,ಎಸ್.ಎಚ್)