ಕರ್ನಾಟಕಮೈಸೂರು

ಸೆ.10-11 : ಸಚಿವ ರೋಷನ್ ಬೇಗ್ ಮೈಸೂರು ಪ್ರವಾಸ

ಮೈಸೂರು, ಸೆ.7 : ನಗರಾಭಿವೃದ್ಧಿ ಹಾಗೂ ಹಜ್ ಸಚಿವರಾದ ಆರ್. ರೋಷನ್ ಬೇಗ್ ಅವರು ಸೆಪ್ಟೆಂಬರ್ 10 ಹಾಗೂ 11 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಸೆಪ್ಟೆಂಬರ್ 10 ರಂದು ಮೈಸೂರಿಗೆ ಆಗಮಿಸಿ ವಿವಿಧ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸೆಪ್ಟೆಂಬರ್ 11 ರಂದು ಬೆಳಿಗ್ಗೆ  10-30 ಗಂಟೆಗೆ ಮೈಸೂರು ಮಹಾನಗರ ಪಾಲಿಕೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚೆಯಲ್ಲಿ ಭಾಗವಹಿಸುವರು.

ಬೆಳಿಗ್ಗೆ 11-30 ಗಂಟೆಗೆ ಈದ್ಗಾ ಮೈದಾನ ಕಾಂಪೌಂಡ್ ಕಾಮಗಾರಿಯ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಿದ ನಂತರ ಮಧ್ಯಾಹ್ನ 12 ಗಂಟೆಗೆ ಮೈಸೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.

(ಎನ್.ಬಿ)

Leave a Reply

comments

Related Articles

error: