ಮೈಸೂರು

ಗ್ರಾಮೀಣಾಭಿವೃದ್ಧಿ ಯೋಜನೆ ಅಭಿವೃದ್ಧಿ ಸಮಿತಿ: ಜಿಪಂ ಸದಸ್ಯೆ ಡಾ.ಪುಷ್ಪಾ ಅಮರ್ ನಾಥ್ ನೇಮಕ

ರಾಜ್ಯ ಸರ್ಕಾರವು ನೂತನವಾಗಿ ರಚಿಸಿರುವ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಗೆ ಜಿಪಂ ಸದಸ್ಯೆ ಡಾ.ಪುಷ್ಪಾ ಅಮರ್ ನಾಥ್ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

ಸಮಿತಿಯಲ್ಲಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಾಧ್ಯಕ್ಷರಾಗಿ ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ಹಾಗೂ ಮೈಸೂರು ಜಿಪಂ ಮಾಜಿ ಅಧ್ಯಕ್ಷರೂ ಸದಸ್ಯರಾಗಿರುವರು. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಪ್ರಕಾರ ಸರ್ಕಾರವು ಆಯವ್ಯಯದಲ್ಲಿ ಮಂಡಿಸಬೇಕಾದ ಅಭಿವೃದ್ಧಿ ಯೋಜನೆಗಳು ಮತ್ತು ವಾರ್ಷಿಕ ಆರ್ಥಿಕ ಪುನರಾವಲೋಕವನ್ನು ರೂಪಿಸಲು ಹಾಗೂ ಸರ್ಕಾರದ ಯೋಜನೆಗಳನ್ನು ಸಮರ್ಥವಾಗಿ ಅನುಷ್ಠಾನಗೊಳಿಸಲು ಸಮಿತಿಯು ನೆರವಾಗಲಿದ್ದು,

ಕೃಷಿ ಸಂಬಂಧಿತ ಚಟುವಟಿಕೆಗಳ, ಲಿಂಗ ಸಂಬಂಧಿತ, ಮಕ್ಕಳ ಹಕ್ಕುಗಳ, ಪರಿಸರ ಮತ್ತು ಜಲ ಸಂರಕ್ಷಣೆ, ಗುಡಿ ಕೈಗಾರಿಕೆ, ಗ್ರಾಮೀಣ ಮತ್ತು ನಗರಾಭಿವೃದ್ಧಿ ಮಕ್ಕಳ ಹಕ್ಕುಗಳ ಕಾರ್ಯಕರ್ತರು ಈ ಕ್ಷೇತ್ರಗಳ ತಜ್ಞರಾಗಿರುವ ಡಾ.ಪುಷ್ಪಾ ಅಮರ್ ನಾಥ್, ಸಿ.ನಾರಾಯಣಸ್ವಾಮಿ, ಡಿ.ಆರ್. ಪಾಟೀಲ, ಪ್ರಮೋದ ಹೆಗಡೆ ಅವರನ್ನು ನೇಮಕಗೊಳಿಸಲಾಗಿದೆ.

ಸಮಿತಿಯ ಉಪಾಧ್ಯಕ್ಷರಾಗಿ ಯೋಜನಾ ಸಚಿವ ಎಂ.ಆರ್.ಸೀತಾರಾಮ್, ನಗರಾಭಿವೃದ್ಧಿ ಸಚಿವ ರೋಷನ್ ಬೇಗ್, ಸಾಮಾಜಿಕ ಆರ್ಥಿಕ ಅಭಿವೃದ್ಧಿಯ ಕ್ಷೇತ್ರ ತಜ್ಞ ವೆಂಕಟರಾವ್ ಘೋರ್ಪಡೆ ಇದ್ದು, ಸದಸ್ಯರಾಗಿ ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಲತಾ ಕೃಷ್ಣರಾವ್, ಗ್ರಾಮಿಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎನ್.ನಾಗಂಬಿಕಾದೇವಿ, ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಮಹೇಂದ್ರ ಜೈನ್, ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಶ್ರೀನಿವಾಸ ಮಾನೆ, ಕೋಟಾ ಶ್ರೀನಿವಾಸ ಪೂಜಾರಿ ಇರುವರು. ಸದಸ್ಯ ಕಾರ್ಯದರ್ಶಿಗಳಾಗಿ ಹಿರಿಯ ಐ.ಎ.ಎಸ್. ಅಧಿಕಾರಿ ಡಾ.ರಜನೀಶ್ ಗೋಯಲ್, ಯೋಜನಾ ಸಮಿತಿ ಅಧ್ಯಕ್ಷರು, ತಲಾ ಇಬ್ಬರು ತಾಲೂಕು ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಗ್ರಾಪಂ ಅಧ್ಯಕ್ಷರು ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.

Leave a Reply

comments

Related Articles

error: