ಕರ್ನಾಟಕ

ಬಡ ಮಕ್ಕಳಿಗೆ ಕಾಳಜಿಯಿಂದ ಶಿಕ್ಷಣ ನೀಡಿ : ಸಚಿವ ಡಾ.ಶರಣ ಪಾಟೀಲ್‍

ಕಲಬುರಗಿ, ಸೆ.8 : ಸರ್ಕಾರಿ ಶಾಲೆಗೆ ಬರುವ ಬಡ ಮಕ್ಕಳನ್ನು ತಮ್ಮ ಮಕ್ಕಳಂತೆ ಕಾಳಜಿ ವಹಿಸಿ ಮೌಲ್ಯಧಾರಿತ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ  ಡಾ.ಶರಣ ಪಾಟೀಲ್ ಅವರು ಶಿಕ್ಷಕರಿಗೆ ಕಿವಿಮಾತು ಹೇಳಿದರು.

ಅವರು ಗುರುವಾರ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಶಾಲೆಯಲ್ಲಿನ ಶಿಕ್ಷಣದ ಬಗ್ಗೆ ಜನರಲ್ಲಿ ಉತ್ತಮ ಅಭಿಪ್ರಾಯವಿಲ್ಲ. ಶಿಕ್ಷಕರು ಸರ್ಕಾರಿ ಶಾಲೆಯ ಮಕ್ಕಳನ್ನು ಗುಣಮಟ್ಟದ ಶಿಕ್ಷಣ ನೀಡಿ ಉತ್ತಮ ಪ್ರಜೆಯನ್ನಾಗಿ ಮಾಡುವ ಮೂಲಕ ಜನರಲ್ಲಿ ಸರ್ಕಾರಿ ಶಾಲೆಯ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿಸಲು ಶ್ರಮಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಶಿಕ್ಷಕರ ವೃತ್ತಿ ಕೌಶಲ್ಯ ಹೆಚ್ಚಿಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ “ಗುರು ಚೇತನ” ಕಾರ್ಯಕ್ರಮದ ಲೋಗೋ ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಸುವರ್ಣಾ ಹಣಮಂತ ಮಾಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಚಿಂಚೋಳಿ ಶಾಸಕರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ  ಕಾರ್ಯದರ್ಶಿ ಡಾ.ಉಮೇಶ ಜಾಧವ, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭಾಗಣಗೌಡ ಸಂಕನೂರ, ಜಿಲ್ಲಾಧಿಕಾರಿ ಅರ್. ವೆಂಕಟೇಶ್ ಕುಮಾರ್ ಪಾಲ್ಗೊಂಡಿದ್ದರು.

(ಎನ್.ಬಿ)

Leave a Reply

comments

Related Articles

error: