ಸುದ್ದಿ ಸಂಕ್ಷಿಪ್ತ

ಅಮೆರಿಕದ ಮೇರಿಲ್ಯಾಂಡ್ ನಲ್ಲಿ ನಡೆದ ರಾಜೇಂದ್ರ ಸ್ವಾಮೀಜಿಯವರ 102ನೇ ಜಯಂತಿ ಮಹೋತ್ಸವ

ಮೈಸೂರು,ಸೆ.5-ಅಮೆರಿಕದ ಮೇರಿಲ್ಯಾಂಡ್ ನಲ್ಲಿರುವ ಜೆಎಸ್ಎಸ್ ಸ್ಪಿರಿಚ್ಯುಯಲ್ ಮಿಷನ್ ನಲ್ಲಿ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ 102ನೇ ಜಯಂತಿ ಮಹೋತ್ಸವವನ್ನು ಆಚರಿಸಲಾಯಿತು. ಮಹೋತ್ಸವದ ಪ್ರಯುಕ್ತ ನಾದತರಂಗಿಣಿ ಕಲಾವೃಂದದವರಿಂದ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶ್ರೀಗಳು ಸಮಾಜಕ್ಕೆ ನೀಡಿದ ಕೊಡುಗೆಯನ್ನು ಎಲ್ಲರೂ ಸ್ಮರಿಸಿದರು. ಕಾರ್ಯಕ್ರಮದಲ್ಲಿ 100 ಕ್ಕೂ ಹೆಚ್ಚು ಅನಿವಾಸಿ ಭಾರತೀಯರು ಪಾಲ್ಗೊಂಡಿದ್ದರು. ಕುಮಾರ ರಾಜಶೇಖರ ಎಲ್ಲರನ್ನು ಸ್ವಾಗತಿಸಿದರು. ಶ್ರೀ ನಾಗಶಂಕರ ವಂದನರ್ಪಣೆ ಮಾಡಿದರು. ಆಲಮಟ್ಟಿ ಶ್ರೀಗಳು ಪ್ರಾಸ್ತಾವಿಕ ನುಡಿಗಳನ್ನಾಡಿ ಕಾರ್ಯಕ್ರಮ ನಿರೂಪಿಸಿದರು. (ವರದಿ-ಎಂ.ಎನ್)

Leave a Reply

comments

Related Articles

error: