ಕರ್ನಾಟಕಮೈಸೂರು

ಪ್ರಥಮ ದರ್ಜೆ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ : ಅರ್ಜಿ ಆಹ್ವಾನ

ಬೆಂಗಳೂರು/ಮೈಸೂರು, ಸೆ.9 : ಕರ್ನಾಟಕ ರಾಜ್ಯ ಸರ್ಕಾರದ ಸಚಿವಾಲಯದಲ್ಲಿನ ಮತ್ತು ವಿವಿಧ ಇಲಾಖೆಗಳಲ್ಲಿರುವ ಒಟ್ಟು 1058 ಪ್ರಥಮ ದರ್ಜೆ ಸಹಾಯಕರ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದಾರೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 7 ಕೊನೆಯ ದಿನ, ಶುಲ್ಕ ಪಾವತಿಸಲು ಅಕ್ಟೋಬರ್ 9 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ: ಪರೀಕ್ಷಾ ವಿಧಾನ ಮತ್ತು ನೇಮಕಾತಿಯ ಪರಿಪೂರ್ಣ ಮಾಹಿತಿಗಾಗಿ ಅಧಿಸೂಚನೆಯನ್ನು ಆಯೋಗದ ವೆಬ್‍ಸೈಟ್ www.kpsc.kar.nic.in ನೋಡಬಹುದು, ಅಥವಾ ಉಪ ಮುಖ್ಯಸ್ಥರು, ವಿಶ್ವವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಗ್ರಂಥಾಲಯ ಕಟ್ಟಡ, ಮಾನಸಗಂಗೋತ್ರಿ, ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು – ಇವರನ್ನು ಸಂಪರ್ಕಿಸಬಹುದು.

(ಎನ್.ಬಿ)

Leave a Reply

comments

Related Articles

error: