ಪ್ರಮುಖ ಸುದ್ದಿಮೈಸೂರು

ತಾಪಂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗದ್ದಲ ಸೃಷ್ಟಿಸಿದ ‘ನೀರು’

ಮೈಸೂರಿನಲ್ಲಿರುವ ನೀರಿನ ಸಮಸ್ಯೆ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಕೆಲ ಅಧಿಕಾರಿಗಳನ್ನು ಮೈಸೂರು ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ತೀವ್ರ ತರಾಟೆಗೆ ತೆದುಕೊಳ್ಳಲಾಯಿತು.

ಜಿಲ್ಲಾ ಪಂಚಾಯಿತಿಯಲ್ಲಿರುವ ಅಬ್ದುಲ್ ನಝೀರ್ ಸಾಬ್ ಆಡಿಟೋರಿಯಂನಲ್ಲಿ ಮೈಸೂರಿನಲ್ಲಿರುವ ನೀರಿನ ಸಮಸ್ಯೆ ಬಗ್ಗೆ ಚರ್ಚಿಸಲು ಗುರುವಾರ ವಿಶೇಷ ಪ್ರಗತಿ ಪರಿಶೀಲನಾ ಸಭೆ ಕರೆಯಲಾಗಿತ್ತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಜಿ.ಟಿ.ದೇವೇಗೌಡ ನೀರಿನ ಸಮಸ್ಯೆ ಈಡೇರಿಸುವಲ್ಲಿ ವಿಫಲರಾದ ಕೆಲ ಅಧಿಕಾರಿಗಳು, ಇಂಜಿನಿಯರ್‍ಗಳ ವಿರುದ್ಧ ಹರಿಹಾಯ್ದರು.

ವಿವಿಧ ಪಂಚಾಯಿತಿಯ ಸದಸ್ಯರು ಮತ್ತು ಪಿಡಿಓಗಳಿಂದ ಅವರ ಪ್ರದೇಶಗಳಲ್ಲಿ ನೀರಿನ ಲಭ್ಯತೆ ಬಗ್ಗೆ ದೇವೇಗೌಡ ಅವರು ಮಾಹಿತಿ ತರಿಸಿಕೊಂಡರು. ಸುಮಾರು 10 ಸಾವಿರ ಜನಸಂಖ್ಯೆಯನ್ನು ಹೊಂದಿರುವ ಬೋಗಾದಿ ಪಂಚಾಯಿತಿ ವ್ಯಾಪ್ತಿಯಲ್ಲಿ 14 ಬೋರ್‍ವೆಲ್‍ಗಳಿದ್ದು, ಸಮರ್ಪಕವಾಗಿ ನೀರು ಪೂರೈಸಲು ಕೆಲ ಬೋರ್‍ವೆಲ್‍ಗಳ ದುರಸ್ತಿ ಮಾಡುವ ಅಗತ್ಯವಿದೆ.

ಗುಂಗ್ರಾಲ್ ಛತ್ರ ಪ್ರದೇಶದಲ್ಲಿ ಬೋರ್‍ವೆಲ್ ಹಾಳಾಗಿರುವ ಬಗ್ಗೆ ಪಿಡಿಒ ಮಾತನಾಡಿ, ಆ ಪ್ರದೇಶದಲ್ಲಿ 11 ಗ್ರಾಮ ಪಂಚಾಯಿತಿಗಳಿವೆ. ಆದರೆ, ಬೋರ್‍ವೆಲ್‍ ಸರಿಪಡಿಸಲು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಯೆಲ್ಚಳ್ಳಿ ಗ್ರಾಮದಲ್ಲಿ ನೀರಿನ ಸಮಸ್ಯೆ ಬಹಳಷ್ಟಿದ್ದು, ವಾಟರ್ ಟ್ಯಾಂಕ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು.

ಗ್ರಾಮ ಪಂಚಾಯಿತಿಗಳಲ್ಲಿರುವ ನೀರಿನ ಸಮಸ್ಯೆಯನ್ನು ನಿವಾರಿಸಲು ಶೀಘ್ರ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಶಾಸಕ ದೇವೇಗೌಡ ಸೂಚಿಸಿದರು.

ಜಿಲ್ಲಾಧಿಕಾರಿ ಡಿ. ರಂದೀಪ್, ಜಿಲ್ಲಾ ಪಂಚಾಯಿತಿ ಸಿಇಒ ಶಿವಶಂಕರ್, ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ಮಂಜುಳಾ ಮತ್ತು ಇತರರು ಉಪಸ್ಥಿತರಿದ್ದರು.

Leave a Reply

comments

Related Articles

error: