ಕರ್ನಾಟಕ

ಉಪನ್ಯಾಸಕರ ಹುದ್ದೆ : ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು, ಸೆ.9 : ಕರ್ನಾಟಕ ಲೋಕಸೇವಾ ಆಯೋಗವು ಮೊರಾರ್ಜಿ ದೇಸಾಯಿ ವಸತಿಯುತ ಪದವಿಪೂರ್ವ ಕಾಲೇಜುಗಳಲ್ಲಿನ ಕನ್ನಡ 23+03 (ಹೈ.ಕ), ಭೌತಶಾಸ್ತ್ರ 23+03 (ಹೈ.ಕ) ಮತ್ತು ರಸಾಯನಶಾಸ್ತ್ರ ಉಪನ್ಯಾಸಕರು 23+03 (ಹೈ.ಕ) ಹುದ್ದೆಗಳಿಗೆ ಮೂಲ ದಾಖಲಾತಿಗಳ ಪರಿಶೀಲನೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಲಾಗಿದೆ. ಮೂಲ ದಾಖಲೆಗಳ ಪರಿಶೀಲನಾ ಕಾರ್ಯವನ್ನು ಸೆಪ್ಟೆಂಬರ್ 22 ರಂದು ನಡೆಸಲು ತೀರ್ಮಾನಿಸಲಾಗಿದೆ.

ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ತಮ್ಮ ರಿಜಿಸ್ಟ್ರೇಷನ್ ನಂಬರ್ ನಮೂದಿಸಿ ಆಯೋಗದ ಅಂತರ್ಜಾಲ http://kpsc.kar.nic.in ಇಂದ ಡೌನ್‍ಲೋಡ್ ಮಾಡಿಕೊಳ್ಳಬಹುದು. (ಎನ್.ಬಿ)

Leave a Reply

comments

Related Articles

error: