ಕರ್ನಾಟಕಮೈಸೂರು

ಸೆಪ್ಟೆಂಬರ್ 10 ರಿಂದ ಮಂಡ್ಯ ಜಿಲ್ಲೆಯ ನಾಲೆಗಳಿಗೆ ನೀರು

ಮಂಡ್ಯ, ಸೆ.9 : ಮಂಡ್ಯ ಜಿಲ್ಲೆಯಕೃಷ್ಣರಾಜ ಸಾಗರ ಜಲಾಶಯ ವ್ಯಾಪ್ತಿಯ ನಾಲೆಗಳಿಗೆ ಸೆಪ್ಟೆಂಬರ್ 10 ರಿಂದ 18 ದಿನಗಳ ಕಾಲ ಕಟ್ಟು ಪದ್ಧತಿಯಲ್ಲಿ ನೀರನ್ನು ಬಿಡಲು ವಸತಿ ಸಚಿವರು ಹಾಗೂ ಮಂಡ್ಯ ಉಸ್ತುವಾರಿ ಸಚಿವರಾದ ಎಂ.ಕೃಷ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಯಿತು.

ಹೇಮಾವತಿ ಜಲಾಶಯದ ವ್ಯಾಪ್ತಿಗೆ ಬರುವ ಮಂಡ್ಯ ಜಿಲ್ಲೆಯ ತಾಲ್ಲೂಕುಗಳಾದ ಕೆ.ಆರ್.ಪೇಟೆ, ನಾಗಮಂಗಲ ಹಾಗೂ ಪಾಂಡವಪುರ ನಾಲೆಗಳಿಗೆ ಹೇಮಾವತಿ ಜಲಾಶಯದಿಂದ 15 ದಿನಗಳ ಕಾಲ ನೀರು ಬಿಡುಗಡೆ ಮಾಡುವುದಲ್ಲದೆ ಕೆರೆಗಳನ್ನು ಶೇ.100 ರಷ್ಟು ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಲು ಹಾಗೂ ಅರೆ ಖುಷ್ಕಿ ಬೆಳೆ ಬೆಳೆಯಲು ರೈತರಲ್ಲಿ ಮನವಿ ಮಾಡಲು ಸಭೆಯಲ್ಲಿ ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ನಾಗಮಂಗಲ ಕ್ಷೇತ್ರದ ಶಾಸಕರಾದ ಚಲುವರಾಯಸ್ವಾಮಿ, ಮಳವಳ್ಳಿ ಕ್ಷೇತ್ರದ ಶಾಸಕರಾದ ನರೇಂದ್ರಸ್ವಾಮಿ, ಶ್ರೀರಂಗಪಟ್ಟಣದ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ಮೇಲುಕೋಟೆ ಕ್ಷೇತ್ರದ ಶಾಸಕರಾದ ಕೆ.ಎಸ್.ಪುಟ್ಟಣ್ಣಯ್ಯ, ಮದ್ದೂರು ಕ್ಷೇತ್ರದ ಶಾಸಕರಾದ ಡಿ.ಸಿ.ತಮ್ಮಣ್ಣ,ಮಂಡ್ಯ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

(ಎನ್.ಬಿ)

Leave a Reply

comments

Related Articles

error: