ಮೈಸೂರು

ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ 16 ಮಂದಿ ಬಂಧನ

ಮೈಸೂರು,ಸೆ.9-ನಗರದ ಮಾನಸಗಂಗೋತ್ರಿಯ ಗೈಡ್ಸ್ ಮೈದಾನದಲ್ಲಿ ಕೆಪಿಎಲ್ ಕ್ರಿಕೆಟ್ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತುಕೊಂಡು ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ತೊಡಗಿದ್ದ 16 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರು ಹರಿಯಾಣ, ಪಂಜಾಬ್‌ ಹಾಗೂ ಉತ್ತರ ಭಾರತ ಮೂಲದವರಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ವಿಜಯಪುರ ಬುಲ್ಸ್‌ ಹಾಗೂ ಬಳ್ಳಾರಿ ಟಸ್ಕರ್ಸ್‌ ನಡುವೆ ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ನಗರ ಅಪರಾಧ ಪತ್ತೆ ದಳ (ಸಿಸಿಬಿ) ಹಾಗೂ ಜಯಲಕ್ಷ್ಮಿಪುರಂ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. (ವರದಿ-ಕೆ.ಎಸ್, ಎಂ.ಎನ್)

Leave a Reply

comments

Related Articles

error: