ಮೈಸೂರು

ದಲಿತರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡುವುದು ಪಕ್ಷದ ಗುರಿ

ಭಾರತೀಯ ಡಾ.ಬಿ.ಆರ್.ಅಂಬೇಡ್ಕರ್ ಜನತಾ ಪಕ್ಷವು ನಂಜನಗೂಡು ಮೀಸಲು ಕ್ಷೇತ್ರದಲ್ಲಿ ನಡೆಯುವ ವಿಧಾನಸಭಾ ಉಪಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ಎಂ.ದೊಡ್ಡಯ್ಯ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ದಲಿತರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡುವುದು ಪಕ್ಷದ ಗುರಿ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷ ರಾಜಣ್ಣ, ರಾಜ್ಯಾಧ್ಯಕ್ಷ ಎ.ಆರ್.ಸ್ವಾಮಿ, ಜಿಲ್ಲಾಧ್ಯಕ್ಷ ಸಿದ್ದರಾಜು, ಪಕ್ಷದ ಮುಖಂಡರಾದ ಮಹದೇವಯ್ಯ ಮತ್ತು ಶೀತಲ್ ಚೌಹಾಣ್ ಹಾಜರಿದ್ದರು.

Leave a Reply

comments

Related Articles

error: