ಕರ್ನಾಟಕ

ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ ನಾಳೆ ಪ್ರತಿರೋಧ ಸಮಾವೇಶ

ಬೆಂಗಳೂರು, ಸೆ. 11- ಹಿರಿಯ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ ನಾಳೆ(ಸೆ.12 ) ರಂದು ಬೃಹತ್ ಮಟ್ಟದಲ್ಲಿ ಸಾಹಿತಿ, ಕಲಾವಿದರು, ಹೋರಾಟಗಾರರು ಸಾಂಸ್ಕೃತಿಕ ಪ್ರತಿರೋಧ ವ್ಯಕ್ತಪಡಿಸಲು ಮುಂದಾಗಿದ್ದಾರೆ.

ಮೆಜೆಸ್ಟಿಕ್ ರೈಲು ನಿಲ್ದಾಣದಿಂದ ಸೆಂಟ್ರಲ್ ಕಾಲೇಜು ಮೈದಾನದವರೆಗೆ ಜಾಥಾ ನಡೆಯಲಿದ್ದು, ಆ ಬಳಿಕ ಬೃಹತ್ ಪ್ರತಿರೋಧ ಸಮಾವೇಶವನ್ನು ನಡೆಸುವ ಮೂಲಕ ಸಾವು-ಕೊಲೆಗಳಿಂದ ವಿಚಾರವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎನ್ನುವ ಸ್ಪಷ್ಟ ಸಂದೇಶವನ್ನು ಹಂತಕರಿಗೆ ರವಾನಿಸಲು ಗೌರಿ ಲಂಕೇಶ್ ಹತ್ಯೆ ವಿರೋಧಿ ಹೋರಾಟ ವೇದಿಕೆ ನಿರ್ಧರಿಸಿವೆ. ಗೌರಿ ಹತ್ಯೆ ಖಂಡಿಸಿ ಸಾಂಸ್ಕೃತಿಕ ಪ್ರತಿರೋಧಕ್ಕೆ ಸಿದ್ಧತೆ ನಡೆದಿದ್ದು, ನಾಳೆ ಸೆಂಟ್ರಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸುಮಾರು 20 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಮೇಧಾ ಪಾಟ್ಕರ್, ತೀಸ್ತಾ ಸೆಟಲ್‌ವಾಳ್ ಸೇರಿದಂತೆ ಅನೇಕ ಹೋರಾಟಗಾರರು ಪಾಲ್ಗೊಳ್ಳಲಿದ್ದು, ಗೌರಿ ಮತ್ತು ಕಲಬುರ್ಗಿ ಹಂತಕರನ್ನು ಶೀಘ್ರ ಬಂಧಿಸುವಂತೆ ಸರ್ಕಾರವನ್ನು ಒತ್ತಾಯಿಸಲಿದ್ದಾರೆ.

Leave a Reply

comments

Related Articles

error: