ಮೈಸೂರು

ನೂತನ ಕುಲಸಚಿವರ ವಿರುದ್ಧ ದಲಿತ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

ಇತ್ತೀಚಿಗೆ ಮೈಸೂರು ವಿವಿಯ ಕುಲಸಚಿವರಾಗಿ ನೇಮಕಗೊಂಡಿದ್ದ ಪ್ರೊ. ಪಿ. ರಾಜಣ‍್ಣ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ದಲಿತ ವಿದ್ಯಾರ್ಥಿಗಳು ಮಾನಸಗಂಗೋತ್ರಿಯ ಕ್ರಾಫರ್ಡ್ ಹಾಲ್‍ ಮುಂದೆ ದಿಢೀರ್ ಪ್ರತಿಭಟನೆ ನಡೆಸಿದರು. ಕುಲಸಚಿವರ ಕಚೇರಿಯಲ್ಲಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ರಾಜಣ್ಣ ತೆರವುಗೊಳಿಸಿದ್ದಾರೆ ಎಂದು ಆರೋಪಿಸಿ ಬುಧವಾರದಂದು ದಲಿತ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ವಿದ್ಯಾರ್ಥಿಗಳು ಬೆದರಿಕೆ ಹಾಕಿರುವ ಬಗ್ಗೆ ಕರ್ತವ್ಯಕ್ಕೆ ಅಡ್ಡಿಪಡ್ಡಿಸಿರುವ ಬಗ್ಗೆ ಕುಲಸಚಿವ ರಾಜಣ್ಣ ಅವರು ವಿದ್ಯಾರ್ಥಿಗಳ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

Leave a Reply

comments

Related Articles

error: