ಸುದ್ದಿ ಸಂಕ್ಷಿಪ್ತ

ರಾಷ್ಟ್ರೀಯ ಆಯುರ್ವೇದ ದಿನಾಚರಣೆ

ಮೈಸೂರು ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ಮೈಸೂರು – ಇವರ ವತಿಯಿಂದ ಅ.28 ರಂದು 2016 ರ ಬೆಳಗ್ಗೆ 9 ಗಂಟೆಗೆ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ರಾಮಕೃಷ್ಣ ನಗರದ ನಮನ ಉದ್ಯಾನವನದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಅಧ್ಯಕ್ಷತೆಯನ್ನ ಶಾಸಕ ಎಂ.ಕೆ. ಸೋಮಶೇಖರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ, ಸಚಿವ  ತನ್ವೀರ್ ಸೇಠ್, ಮೇಯರ್ ಭೈರಪ್ಪ, ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿ.ಪಂ. ಅಧ್ಯಕ್ಷೆ ನಯಿಮಾ ಸುಲ್ತಾನ್ ಸೇರಿದಂತೆ ಸಂಸದರು ಹಾಗೂ ಶಾಸಕರು, ವಿಧಾನ ಪರಿಷತ್ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇದೇ ಸಂದರ್ಭ ಉಚಿತ ಮಧುಮೇಹ ತಪಾಸಣೆ ಮತ್ತು ಆಯುಷ್ ಚಿಕಿತ್ಸಾ ಶಿಬಿರವನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1ರವರೆಗೆ ರಾಮಕೃಷ್ಣನಗರದ ನಮನ ಉದ್ಯಾನವನದಲ್ಲಿ  ಹಮ್ಮಿಕೊಳ್ಳಲಾಗಿದ್ದು ಬೆಳಿಗ್ಗೆ 10 ರಿಂದ 11ರ ವರೆಗೆ ಆಯುಷ್ ವೈದ್ಯಾಧಿಕಾರಿ ಡಾ. ಸುಖೇಶ್ ಅವರು “ಮಧುಮೇಹಿಗಳ ಆಹಾರ ಕ್ರಮ”ದ ಬಗ್ಗೆ, ಮಧ್ಯಾಹ್ನ 12 ಗಂಟೆಯಿಂದ ಡಾ.ಸುಜಾತ ಮಧುಮೇಹ  ನಿಯಂತ್ರಣಕ್ಕೆ ಕೆಲವು ಯೋಗಾಭ್ಯಾಸ ವಿಷಯವಾಗಿ ಉಪನ್ಯಾಸ ನೀಡುವರು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9448566705. 9902270154 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: