ಮೈಸೂರು

ಮಕ್ಕಳಿಗೆ ಶಿಕ್ಷಣ ಜತೆಗೆ ಸಂಸ್ಕಾರವನ್ನು ಕಲಿಸಿ: ಶ್ರದ್ಧಾ ಅಮಿತ್

ಮೈಸೂರು,ಸೆ.11-ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈಸೂರು ಜಿಲ್ಲಾ ಕಚೇರಿಯಲ್ಲಿ ನಡೆದ ಮಕ್ಕಳ ಸಂರಕ್ಷಣೆಯ ಕುರಿತು ಮೈಸೂರು ಪ್ರಾದೇಶಿಕ ವ್ಯಾಪ್ತಿಯ ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಕಾರ್ಯಾಗಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪುತ್ರಿ ಶ್ರದ್ಧಾ ಅಮಿತ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜ್ಞಾನವಿಕಾಸ ಕೇಂದ್ರಗಳನ್ನು ಮಾಡುವ ಮೂಲಕ ಗ್ರಾಮೀಣ ಭಾಗದ ಮಹಿಳೆಯರಿಗೆ ವಿವಿಧ ತರಬೇತಿಯನ್ನು ನೀಡುವುದರೊಂದಿಗೆ ಜ್ಞಾನವನ್ನು ವಿಕಸನಗೊಳಿಸಲಾಗುತ್ತಿದೆ. ನಮ್ಮ ದೇಶವು ಸುಸಂಸ್ಕೃತ ದೇಶವಾಗಿದ್ದು, ಸಂಸ್ಕಾರದಿಂದ ಕೂಡಿದೆ. ಎಲ್ಲಿ ಸಂಸ್ಕಾರವಿರುವುದಿಲ್ಲವೋ ಅಲ್ಲಿ ಅನಾಚಾರ ತಾಂಡವವಾಡುತ್ತಿದೆ ಎಂದರ್ಥ. ಮಕ್ಕಳಿಗೆ ಒಳ್ಳೆಯ ಶಾಲೆಗಳಲ್ಲಿ ಶಿಕ್ಷಣ ನೀಡಿದರೆ ಸಾಲದು ಅವರಿಗೆ ಸಂಸ್ಕಾರವನ್ನು ಕಲಿಸಬೇಕು. ಶಿಕ್ಷಣದ ಜತೆ ಸಂಸ್ಕಾರ ದೊರೆತಾಗ ಮಾತ್ರ ಉತ್ತಮ ಪ್ರಜೆಯಾಗಲು ಸಾಧ್ಯ ಎಂದರು.

ಜ್ಞಾನವಿಕಾಸ ಕಾರ್ಯಕ್ರಮದಡಿ ಗುರುತಿಸಬಹುದಾದ ಕಾರ್ಯಕ್ರಮಗಳಾದ ಪ್ರಾದೇಶಿಕ ವ್ಯಾಪ್ತಿಯಲ್ಲಿ 15 ಬಾಲ್ಯವಿವಾಹವನ್ನು ತಡೆಯಲಾಗಿದೆ. ಸುಮಾರು 2558 ಕುಟುಂಬಗಳಿಗೆ ಸರ್ಕಾರ ವಿವಿಧ ಸೌಲಭ್ಯಗಳನ್ನು ಒದಗಿಸಿಕೊಟ್ಟಿದೆ. 235 ಕಾಲೋನಿ ಕುಟುಂಬಗಳಲ್ಲಿ ಸ್ವಚ್ಛತೆಯ ಅರಿವು ಮೂಡಿಸಕಾಗುದೆ, 10196 ಮಹಿಳೆಯರು ಮತ್ತು ಮಕ್ಕಳಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆ ಕುರಿತು ಅರಿವು ಮೂಡಿಸಿ ಸಮಸ್ಯೆ ನಿವಾರಣೆ ಮಾಡಲಾಗಿದೆ. ಹೀಗೆ ಅನೇಕ ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿದೆ ಎಂದು ಹೇಳಿದರು.

ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಅಶ್ವಿನಿ, ಮೈಸೂರು ಜಿಲ್ಲಾ ನಿರ್ದೇಶಕರಾದ ವಿ.ವಿಜಯಕುಮಾರ್ ನಾಗನಾಳ, ಯೋಜನಾಧಿಕಾರಿಗಳಾದ ಸೋಮನಾಥ್, ಯು.ಎನ್.ಚಂದ್ರಶೇಖರ್, ಸದಾಶಿವ ಉಪಸ್ಥಿತರಿದ್ದರು. (ವರದಿ-ಎಂ.ಎನ್)

 

Leave a Reply

comments

Related Articles

error: