ಮೈಸೂರು

ಸೆಪ್ಟೆಂಬರ್ 13 ರಂದು ಸೆಸ್ಕ್ ಜನಸಂಪರ್ಕ ಸಭೆ

ಮೈಸೂರು, ಸೆ.12 : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಕೇಂದ್ರ ಮತ್ತು ಚಾಮುಂಡಿಪುರಂ ಉಪ ವಿಭಾಗದ ವ್ಯಾಪ್ತಿಯ ಗ್ರಾಹಕರಿಗೆ ಸೆ.13 ರಂದು ಬೆಳಿಗ್ಗೆ ಕೇಂದ್ರ ಉಪ ವಿಭಾಗ ಕಚೇರಿಯಲ್ಲಿ ಹಾಗೂ ಮಧ್ಯಾಹ್ನ 3 ಗಂಟೆಗೆ ಚಾಮುಂಡಿಪುರಂ ಉಪ ವಿಭಾಗ ಕಚೇರಿಯಲ್ಲಿ ಜನಸಂಪರ್ಕ ಸಭೆ ನಡೆಯಲಿದೆ. ಗ್ರಾಹಕರು ವಿದ್ಯುತ್ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳೇನಾದರೂ ಇದ್ದಲ್ಲಿ ಸಭೆಗೆ ಆಗಮಿಸಿ ಲಿಖಿತ ಅರ್ಜಿಗಳನ್ನು ಸಲ್ಲಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಕಾರ್ಯನಿರ್ವಾಹಕ ಇಂಜಿನಿಯರ್ ಅವರು ತಿಳಿಸಿದ್ದಾರೆ.

(ಎನ್.ಬಿ)

Leave a Reply

comments

Related Articles

error: