ಸುದ್ದಿ ಸಂಕ್ಷಿಪ್ತ

ಎರಡು ಪುಸ್ತಕ ಬಿಡುಗಡೆ ಕಾರ್ಯಕ್ರಮ

ಪ್ರೊ. ಆರ್. ರಾಜಣ್ಣ ಮತ್ತು ಪ್ರೊ. ಎ.ಸಿ. ನಾಗೇಶ್ ಅವರ ಎರಡು ಪುಸ್ತಕಗಳ ಬಿಡುಗಡೆ ಸಮಾರಂಭವನ್ನು ಮೈಸೂರಿನ ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಅ. 28 ರ ಸಂಜೆ 5 ಗಂಟೆಗೆ ಕಾರ್ಯಕ್ರಮ ಆಯೋಜಿಸಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನ ಮೈಸೂರು ವಿವಿಯ ಕುಲಪತಿಗಳಾದ ಪ್ರೊ. ಕೆ.ಎಸ್. ರಂಗಪ್ಪ ಅವರು ವಹಿಸಿಕೊಳ್ಳಲಿದ್ದಾರೆ. ಪುಸ್ತಕ ಬಿಡುಗಡೆ ಮಾಡಲು ಹಿರಿಯ ಅಧಿಕಾರಿಗಳಾದ ಎಂ.ಆರ್. ರವಿ ಅವರು ಆಗಮಿಸಲಿದ್ದು, ಪುಸ್ತಕದ ಕುರಿತು ನಿವೃತ್ತ ಪ್ರಾಧ್ಯಪಕರಾದ ಬಿ.ಸಿ. ಮಹಾಬಲೇಶ್ವರಪ್ಪ ಮಾತನಾಡಲಿದ್ದಾರೆ. ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚೆನ್ನಣ್ಣನವರ್ ಅವರು ಆಗಮಿಸಲಿದ್ದು, ಇವರು ಮಾತ್ರವಲ್ಲದೆ ಇನ್ನೂ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

Leave a Reply

comments

Related Articles

error: