ಮೈಸೂರು

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಸೆ.12:- ಕೂರ್ಗಳ್ಳಿಯ ಇಂಡಸ್ಟ್ರೀಯಲ್ ಏರಿಯಾದಲ್ಲಿನ ಸೆವೆನ್ ಹಿಲ್ಸ್ ಇಂಟರ್ ನ್ಯಾಶನಲ್ ಫ್ಯಾಕ್ಟರಿಯಲ್ಲಿನ  ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಮಂಗಳವಾರ ಫ್ಯಾಕ್ಟರಿಯ ಎದುರು ಜಮಾಯಿಸಿದ ಪ್ರತಿಭಟನಾಕಾರರು ಮಾತನಾಡಿ ನಮಗೆ ಕಂಪನಿಯ ಮಾಲಿಕರು ಬೋನಸ್ ಕೊಡಬೇಕೆಂದು ಒತ್ತಾಯಿಸಿದರು. ಈ ಹಿಂದೆ ಬೋನಸ್ ಕೊಡುವುದಾಗಿ ತಿಳಿಸಿದ್ದರು ಆದರೆ ಕೊಟ್ಟಿಲ್ಲ. ಅಷ್ಟೇ ಅಲ್ಲ  ನಮಗೆ ಕಂಪನಿಯಿಂದ ಸಿಗಬೇಕಾದ ಸೌಲಭ್ಯಗಳನ್ನು ದೊರಕಿಸಿಕೊಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ನೂರಾರು ಮಂದಿ ಕಾರ್ಮಿಕರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: