ಪ್ರಮುಖ ಸುದ್ದಿಮೈಸೂರು

ನಿರುದ್ಯೋಗಿ ಯುವಜನತೆ ಕೌಶಲ್ಯ ತರಬೇತಿಯನ್ನು ಬಳಸಿಕೊಂಡು ಸದುಪಯೋಗಪಡಿಸಿಕೊಳ್ಳಿ : ಸಂಸದ ಪ್ರತಾಪ್ ಸಿಂಹ

ಮೈಸೂರು,ಸೆ.13:-  ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿಯಲ್ಲಿ ಯುವಕ-ಯುವತಿಯರ ಉಚಿತ ವೃತ್ತಿಪರ ಕೌಶಲ್ಯ ತರಬೇತಿ ಕೇಂದ್ರವನ್ನು ಮೈಸೂರಿನಲ್ಲಿ ಬುಧವಾರ ಸಂಸದ ಪ್ರತಾಪ್ ಸಿಂಹ ಅವರು ದೀಪ ಬೆಳಗಿಸುವ ಮೂಲಕ ಹಾಗೂ ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು ನಿರುದ್ಯೋಗಿ ಯುವಕ-ಯುವತಿಯರ ಅನುಕೂಲಕ್ಕಾಗಿ ಪ್ರಧಾನಮಂತ್ರಿ ಕೌಶಲ್ಯ ಯೋಜನೆಯಡಿ ತರಬೇತಿ ನೀಡಲಾಗುತ್ತಿದೆ. ಯುವಕರನ್ನು ಕೆಲಸಕ್ಕೆ ತಯಾರು ಮಾಡುವ ನಿಟ್ಟಿನಲ್ಲಿ ದೇಶದಾದ್ಯಂತ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ನಿರುದ್ಯೋಗಿ ಯುವಕ ಯುವತಿಯರು ತರಬೇತಿಯನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಈ ಸಂದರ್ಭದಲ್ಲಿ ನಗರಪಾಲಿಕೆ ಸದಸ್ಯೆ ಮಹದೇವಮ್ಮ,, ರಜನಿ ಅಣ್ಣಯ್ಯ, ಜಿ.ಪಂ. ಉಪಕಾರ್ಯದರ್ಶಿ ಶಿವರಾಮೇಗೌಡ, ಭರಣಿ ಫೌಂಡೇಶನ್ ಅಧ್ಯಕ್ಷೆ ಸುನಿತಾ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಶಶಿಧರ್ ಇದ್ದರು.         (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: