ಮೈಸೂರು

ರಾಜ್ಯದ ಸಮರ್ಗ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಿ: ಯತೀಂದ್ರ

ಮೈಸೂರು, ಸೆ.೧೩: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನೂರಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿದ್ದು, ಪ್ರತಿಯೊಂದು ಕುಟುಂಬ ಒಂದೊಂದು ಸೌಲಭ್ಯ ಪಡೆದಿದೆ. ಆದ್ದರಿಂದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ವರುಣಾ ಕ್ಷೇತ್ರದ ಹೊಸಹಳ್ಳಿ, ಮುzಗೌಡನಹುಂಡಿ, ಕಡವೇಕಟ್ಟೆ ಹುಂಡಿ, ಪಿಲ್ಲಹಳ್ಳಿ, ದಂಡಿಕೆರೆ, ವರುಣಾ ಗ್ರಾಮಗಳಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ವರುಣಾ ಕ್ಷೇತ್ರದ ಅಭಿವೃದ್ಧಿಗೆ ಈಗಾಗಲೇ ಒಂದು ಸಾವಿರ ಕೋಟಿ ರೂ. ಖರ್ಚಾಗಿದ್ದು, ಶೇ. ೮೦ರಷ್ಟು ಕಾಮಗಾರಿಗಳು ಮುಗಿದಿವೆ. ಸಾಮಾನ್ಯ ವರ್ಗದ ಜನರ ರಸ್ತೆ ಅಭಿವೃದ್ಧಿಗೆ ೧೧೭ ಕೋಟಿ ರೂ. ಬಿಡುಗಡೆಯಾಗಿದೆ. ಮುzಗೌಡನಹುಂಡಿ ರಸ್ತೆ ಅಭಿವೃದ್ಧಿಗೆ ೪೯ ಲಕ್ಷ ರೂ. ಬಿಡುಗಡೆಯಾಗಿದ್ದು, ಗ್ರಾಮಸ್ಥರು ಕಾಮಗಾರಿಯನ್ನು ಗುಣಮಟ್ಟದಿಂದ ಮಾಡುವಂತೆ ನೋಡಿಕೊಳ್ಳಬೇಕು. ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ಜನರು ವಾಸಿಸುವ ರಸ್ತೆಗಳೆಲ್ಲವನ್ನು ಸಂಪೂರ್ಣವಾಗಿ ಕಾಂಕ್ರೀಟ್ ರಸ್ತೆಗಳನ್ನಾಗಿ ಮಾಡಲಾಗುತ್ತಿದೆ. ಪ್ರತಿಯೊಂದು ಗ್ರಾಮಕ್ಕೂ ಅಂಗನವಾಡಿ ಕಟ್ಟಡ, ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಮೂಲ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಉಳಿದ ಕಾಮಗಾರಿಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಈ ವರ್ಷದೊಳಗೆ ಮಾಡಿಕೊಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ, ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳ ಮಾನಸ, ಜಿ.ಪಂ. ಸದಸ್ಯೆ ಭಾಗ್ಯ ಕೃಷ್ಣೇಗೌಡ, ತಾ.ಪಂ. ಸದಸ್ಯೆ ಅಂಜಲಿ, ಮುದ್ದರಾಮೇಗೌಡ, ಎಪಿಎಂಸಿ ಉಪಾಧ್ಯಕ್ಷ ಬಂಡಿಪಾಳ್ಯ ಬಸವರಾಜು, ಎಪಿಎಂಸಿ ಸದಸ್ಯರಾದ ಸಿದ್ದರಾಮನಹುಂಡಿ ಬಸವರಾಜು, ಮಹಾದೇವಪ್ಪ, ಮೈದನಹಳ್ಳಿ ಶಿವಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: