ಮೈಸೂರು

ಶಿಕ್ಷಣ ಇಲಾಖೆ ಮಾಹಿತಿ ಮಳಿಗೆ ಉದ್ಘಾಟನೆ

ಮೈಸೂರಿನ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ತೆರೆದಿರುವ ಶಿಕ್ಷಣ ಇಲಾಖೆ ಮಾಹಿತಿ ಮಳಿಗೆಯನ್ನು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಿಕ್ಷನ ಸಚಿವ ತನ್ವೀರ್ ಸೇಠ್ ಉದ್ಘಾಟಿಸಿದರು.

ಉದ್ಘಾಟನೆಯ ಬಳಿಕ ಮಾತನಾಡಿದ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಅನೇಕ ಮೌಲ್ಯಗಳನ್ನು ಬಿಂಬಿಸುವ ಮಳಿಗೆ ಇದಾಗಿದೆ. ಇದನ್ನು ಆರಂಭದಲ್ಲೇ ತೆರೆಯಬೇಕಿತ್ತು. ಆದರೆ ತಡವಾಯಿತು ಎಂದರು. ಮುಂದಿನ ವರ್ಷದಿಂದ ಮಕ್ಕಳಿಗೆ ಶಾಲೆ ಅರಂಭಲ್ಲೇ ಪಠ್ಯಪುಸ್ತಕ ಸಮವಸ್ತ್ರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಸಂಘಸಂಸ್ಥೆಗಳು, ಕೈಗಾರಿಕೋದ್ಯಮಿಗಳು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಲು ಪೂರಕವಾಗಿ ಹೊಸ ನೀತಿಯೊಂದನ್ನು ಜಾರಿಗೆ ತರಲಾಗುತ್ತಿದೆ ಎಂದರಲ್ಲದೇ, ಈ ಬಾರಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಪಾರದರ್ಶಕತೆ ತರಲು ಪರೀಕ್ಷಾ ಕೇಂದ್ರಗಳಲ್ಲಿ  ಸಿಸಿಟಿವಿ ಅಳವಡಿಸಲಾಗುವುದು. ಪ್ರಶ್ನೆಪತ್ರಿಕೆ ಸಾಗಾಟಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗುವುದು ಎಂದರು.

ವೇದಿಕೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರವಿಶಂಕರ್, ಮುಡಾ ಸದಸ್ಯ ಅನ್ವರ್ ಪಾಷಾ ಸೇರಿದಂತೆ ನಗರಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

Leave a Reply

comments

Related Articles

error: