ಮೈಸೂರು

ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಅಭಿಯಾನ

ಮೈಸೂರು,ಸೆ.14:- ಮೈಸೂರು ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಯರು ಗುರುವಾರ ಬೆಳಿಗ್ಗೆ ಕಾಲೇಜಿನ ಆವರಣವನ್ನು ಸ್ವಚ್ಛಗೊಳಿಸುವ ಅಭಿಯಾನವನ್ನು ಹಮ್ಮಿಕೊಂಡಿದ್ದರು.

ಈ ಸಂದರ್ಭ ಪ್ರಜಾನುಡಿ ದಿನ ಪತ್ರಿಕೆಯ ಸಂಪಾದಕ ಲೋಕೇಶ್ ಬಾಬು ಹಾಗೂ ಕಾಲೇಜಿನ ಪ್ರಾಂಶುಪಾಲ ಚನ್ನಬಸವೇಗೌಡ ಉಪಸ್ಥಿತರಿದ್ದರು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿದರೆ ಪರಿಸರವೂ ಸ್ವಚ್ಛವಾಗಿರುತ್ತದೆ ಮತ್ತು ಆರೋಗ್ಯವೂ ಸುಸ್ಥಿರವಾಗಿರುತ್ತದೆ. ಮನಸ್ಸೂ ಮುದವಾಗಿರುತ್ತದೆ ಎಂದು ವಿದ್ಯಾರ್ಥಿಗಳು ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: