ಕರ್ನಾಟಕ

ಕಾನೂನು ಅರಿವು ಕಾರ್ಯಾಗಾರಕ್ಕೆ ಚಾಲನೆ

ಸೋಮವಾರಪೇಟೆ, ಸೆ.14: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವರುಗಳ ಆಶ್ರಯದಲ್ಲಿ ತಾಕೇರಿ ಸಮುದಾಯಭವನದಲ್ಲಿ ಪೋಷಕಾಂಶ ಆಹಾರ ಸಪ್ತಾಹ ಮತ್ತು ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಆಂಗವಾಗಿ ತಾಕೇರಿ ಗ್ರಾಮದ ಸಮುದಾಯಭವನದಲ್ಲಿ ಕಾನೂನು ಅರಿವು ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮವನ್ನು ಇಲ್ಲಿನ ಜೆಎಂಎಫ್‍ಸಿಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪರಶುರಾಮ್ ಎಫ್.ದೊಡ್ಡಮನಿ ಉದ್ಘಾಟಿಸಿದರು. ನಂತರ ಅವರು ಮಾತನಾಡಿ, ಪೋಷಕಾಂಶಯುಕ್ತ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿಸುತ್ತದೆ. ಸೊಪ್ಪು, ತರಕಾರಿ, ಧಾನ್ಯಗಳು, ಹಣ್ಣುಗಳ ಸೇವನೆಯಿಂದ ಜ್ಞಾಪಕಶಕ್ತಿ ಹೆಚ್ಚುತ್ತದೆ ಎಂದು ಹೇಳಿದರು. ಆತ್ಮಹತ್ಯೆಗೆ ಪ್ರಯತ್ನಿಸುವುದು ಕಾನೂನುಬಾಹಿರ, ಮನುಷ್ಯನಿಗೆ ಆತ್ಮಹತ್ಯೆ ಮಾಡಿಕೊಳ್ಳುವಂತ ಸಮಸ್ಯೆಗಳು ಇರುವುದಿಲ್ಲ. ಎಲ್ಲ ಸಮಸ್ಯೆಗಳಿಗೆ ಪರಿಹಾರವಿರುತ್ತದೆ. ಮಾಹಿತಿ ವಿನಿಮಯ, ಸಭ್ಯರೊಂದಿಗೆ ಚರ್ಚೆಯ ಮೂಲಕ ತಮ್ಮ ಸಮಸ್ಯೆ ಪರಿಹಾರ ಕಂಡುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಂ.ಬಿ.ಅಭಿಮನ್ಯು ಕುಮಾರ್, ಜಿಪಂ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾಪಂ ಸದಸ್ಯ ಬಿ.ಬಿ.ಸತೀಶ್, ಸಿಡಿಪಿಒ ಸಂಪತ್ ಕುಮಾರ್ ಇದ್ದರು. ಚಂದ್ರಿಕಾ, ಲೀಲಾವತಿ, ಕಾವೇರಿ ಕಾರ್ಯಕ್ರಮ ನಿರ್ವಹಿಸಿದರು. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: