ಮೈಸೂರು

ಸೆಪ್ಟೆಂಬರ್ 18 ರಿಂದ ದಸರಾ ಚಲನಚಿತ್ರೋತ್ಸವ ನೋಂದಣಿ ಮಾಹಿತಿ

ಮೈಸೂರು, ಸೆ.15 : ಮೈಸೂರು ದಸರಾ ಮಹೋತ್ಸವ 2017ರ ಅಂಗವಾಗಿ ಐನಾಕ್ಸ್ ಚಿತ್ರಮಂದಿರದಲ್ಲಿ ಸೆಪ್ಟೆಂಬರ್ 22 ರಿಂದ 28 ರವರೆಗೆ ಹಮ್ಮಿಕೊಳ್ಳಲಾಗಿರುವ ದಸರಾ ಚಲನಚಿತ್ರೋತ್ಸವಕ್ಕೆ ಸೆಪ್ಟೆಂಬರ್ 18 ರಿಂದ ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ಧನ್ವಂತ್ರಿ ರಸ್ತೆಯಲ್ಲಿರುವ ವಾರ್ತಾ ಭವನದಲ್ಲಿ ನೋಂದಣಿ ಮಾಡಲಾಗುವುದು.

18 ವರ್ಷ ಮೇಲ್ಪಟ್ಟವರಿಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ವಯೋಮಿತಿಯ ದಾಖಲಾತಿಗಾಗಿ ಆಧಾರ್ ಕಾರ್ಡ್, ಮತದಾನದ ಗುರುತಿನ ಚೀಟಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿಯ, ಅಥವಾ ಇತರೆ ಯಾವುದಾದರೂ ಒಂದು ದಾಖಲಾತಿಯ ಜೆರಾಕ್ಸ್ ಪ್ರತಿ  ಹಾಗೂ ಎರಡು ಪಾಸ್‍ಪೊರ್ಟ್ ಅಳತೆಯ ಭಾವಚಿತ್ರ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳುವುದು. ನೋಂದಣಿಗೆ 300 ರೂ. ನಿಗದಿ ಮಾಡಲಾಗಿದ್ದ, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9448092049/ 8970543203 ಅನ್ನು ಸಂಪರ್ಕಿಸಬಹುದು.

(ಎನ್.ಬಿ)

Leave a Reply

comments

Related Articles

error: