ಮೈಸೂರು

ಪೋಷಕರು, ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಬೇಕು: ರಂದೀಪ್

ಮೈಸೂರು, ಸೆ.೧೬: ಸ್ಪರ್ಧಾತ್ಮಕ ಜಗತ್ತಿನಲ್ಲಿ ಮುಂದಿನ ದಿನಗಳಲ್ಲಿ ಉದ್ಯೋಗದ ಸಮಸ್ಯೆ ನಿವಾರಣೆಯಾಗಲಿದ್ದು ಇಂದಿನ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ಅಭಿಪ್ರಾಯಪಟ್ಟರು.
ಶನಿವಾರ ನಗರದ ಜಗನ್ಮೋಹನ ಅರಮನೆಯಲ್ಲಿ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಗುಣಾತ್ಮಕ ಶಿಕ್ಷಣದೆಡೆಗೆ ಎಲ್ಲಾ ಮಕ್ಕಳು ಕುರಿತ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಶಿಕ್ಷಣಕ್ಕೆ ಇನ್ನಿಲ್ಲದ ಪ್ರಾಮುಖ್ಯತೆ ದೊರೆಯುತ್ತಿದೆ. ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಶ್ರಮಿಸುತ್ತಾರೆ. ಅಲ್ಲದೆ ಇತ್ತೀಚಿನ ದಿನಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಹೆಚ್ಚಿದೆ. ಮುಂದಿನ ದಿನಗಳಲ್ಲಿ ಉದ್ಯೋಗ ಸಮಸ್ಯೆ ನಿವಾರಣೆಯಾಗಲಿದ್ದು, ಪೋಷಕರು ಹಾಗೂ ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಲು ಶ್ರಮಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರಸ್ವಾಮಿ, ಆರ್‌ಎಲ್‌ಎಚ್‌ಪಿ ನಿರ್ದೇಶಕಿ ಸರಸ್ವತಿ, ಮೈಸೂರು ಕೊಳಚೆ ನಿವಾಸಿಗಳ ಒಕ್ಕೂಟದ ಅಧ್ಯಕ್ಷ ಆನಂದ್, ಧ್ವನಿ ಮಕ್ಕಳ ಒಕ್ಕೂಟದ ಅಧ್ಯಕ್ಷೆ ಷಾಹಿನ್ ತಾಜ್, ವಿದ್ಯೋದಯ ಮಕ್ಕಳ ಒಕ್ಕೂಟದ ಅಧ್ಯಕ್ಷೆ ಲಾವಣ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: