ಮೈಸೂರು

ಭೂಮಿಯ ಫಲವತ್ತತೆ ಕಾಪಾಡಿಕೊಂಡರೆ ಅಭಿವೃದ್ಧಿ: ಶಿವಶಂಕರ್

ಮೈಸೂರು, ಸೆ.೧೬: ಶತಮಾನೋತ್ಸವದ ವರ್ಷಾಚರಣೆ ಅಂಗವಾಗಿ ನಾಗನಹಳ್ಳಿ ಸಾವಯವ ಕೃಷಿ ಸಂಶೋದನಾ ಕೇಂದ್ರದಲ್ಲಿ ಜಿಲ್ಲೆಯಲ್ಲಿನ ರೈತಾಪಿ ವರ್ಗದವರಿಗೆ ಹವಾಮಾನ ಬದಲಾವಣೆಯಿಂದ ನೀರಿನ ಲಭತೆ ಮತ್ತು ಮಣ್ಣಿನ ಆರೋಗ್ಯದ ಮೇಲೆ ಉಂಟಾಗುವ ಪರಿಣಾಮಗಳ ಬಗ್ಗೆ ಒಂದು ದಿನದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಮಂಡ್ಯ ವಿ.ಸಿ.ಫಾರಂನ ಡೀನ್ ಡಾ.ಟಿ.ಶಿವಶಂಕರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೃಷಿ ದೇಶದ ಆರ್ಥಿಕತೆಯ ಬೆನ್ನೆಲುಬು. ಕೃಷಿಯನ್ನು ಅಭಿವೃದ್ಧಿಪಡಿಸುವ ಸಲುವಾಗಿ ಸರ್ಕಾರ ಅನೇಕ ಯೋಜನೆಗಳನ್ನು ಕೈಗೊಂಡಿದ್ದು ರೈತರು ಅವುಗಳ ಸದುಪಯೋಗಪಡೆದುಕೊಳ್ಳಬೇಕು. ಕಡಿಮೆ ನೀರಿನಲ್ಲೂ ಬೆಳೆಯಬಹುದಾದ ಬೆಳೆಗಳನ್ನು ಬೆಳೆಯುವ ಮೂಲಕ ಅಭಿವೃದ್ಧಿ ಕಾಣಬೇಕು. ಜತೆಗೆ ಭೂಮಿಯ ಫಲವತ್ತತೆಯನ್ನೂ ಕಾಪಾಡಿಕೊಳ್ಳಬೇಕು. ಇದರಿಂದ ಹೆಚ್ಚು ಇಳುವರಿ ಪಡೆಯಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಲಯ ಕೃಷಿ ಸಂಶೋಧನಾ ಕೇಂದ್ರದ ಡಾ.ಸಿ.ಆರ್.ರವಿಶಂಕರ್, ವಿಸ್ತರಣಾ ಸಹ ನಿರ್ದೇಶಕ ಡಾ.ವೆಂಕಟೇಶ್, ಡಾ.ಕೆ.ಎಂ.ಸೋಮಸುಂದರ, ರಮೇಶ್.ಪಿ, ಶ್ರೀ.ಕೇಶವಮೂರ್ತಿ, ಡಾ.ನಾಗರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: