ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಮಾತಾಡುವುದಕ್ಕೆ ಬಿಜೆಪಿ ಅವರಿಗೆ ನೈತಿಕ ಹಕ್ಕಿಲ್ಲ : ಕೆ.ಸಿ.ವೇಣುಗೋಪಾಲ್

ರಾಜ್ಯ(ಬೆಂಗಳೂರು) ಸೆ.16:- ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ ರಾವ್ ಅವರ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಇಂದು ಸರ್ಕಾರದ ಸಾಧನೆಗಳ ಬಹಿರಂಗ ಚರ್ಚೆಗೆ ಸಿದ್ಧ ಎಂದು ಬಿಜೆಪಿಯ ಸವಾಲನ್ನು ಸ್ವೀಕರಿಸಿದ್ದಾರೆ.

ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ದುರಾಡಳಿತದ ಬಗ್ಗೆ ಬಹಿರಂಗ ಚರ್ಚೆಗೆ ನಾವು ಸಿದ್ಧ. ವೇದಿಕೆ ಸಿದ್ಧಪಡಿಸಿ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಪಿ. ಮುರುಳೀಧರರಾವ್ ಇತ್ತೀಚೆಗೆ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರಿಗೆ ಸವಾಲು ಹಾಕಿದ್ದರು. ಇದನ್ನು ಇಂದು ಸ್ವೀಕರಿಸಿರುವ ವೇಣುಗೋಪಾಲ್, ಚರ್ಚೆಗೆ ನಾವು ಕೂಡ ಸಿದ್ಧರಿದ್ದೇವೆ. ಸ್ಥಳ ಮತ್ತು ಸಮಯವನ್ನು ಬಿಜೆಪಿಯೇ ನಿಗದಿ ಪಡಿಸಲಿ ಎಂದು ಹೇಳಿದ್ದಾರೆ.

ಸರಣಿ ಸಭೆಗಳನ್ನು ಆರಂಭಿಸಿದ್ದು, ಸರ್ಕಾರದ ಕಾರ್ಯಕ್ರಮ, ಯೋಜನೆಗಳನ್ನು ಸಮರ್ಪಕವಾಗಿ ಪ್ರಚಾರ ಮಾಡಿ, ಸರ್ಕಾರದ ಪರ ಅಭಿಪ್ರಾಯ ರೂಪಿಸುವಂತೆ ಸಭೆಯಲ್ಲಿ ಸಂಬಂಧಪಟ್ಟ ಪ್ರಚಾರ ಮಾಧ್ಯಮ ಘಟಕಗಳಿಗೆ ಸೂಚಿಸಲಾಯಿತು. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು. ಪಕ್ಷದ ಮಾಧ್ಯಮ ಘಟಕ, ಸೋಷಿಯಲ್ ಮಿಡಿಯಾ ಹಾಗೂ ಐಟಿ ಸೆಲ್‌ಗಳ ಕಾರ್ಯಚಟುವಟಿಕೆಗಳನ್ನು ಪರಿಶೀಲನೆ ನಡೆಸಿದ ವೇಣುಗೋಪಾಲ್, ಚುನಾವಣೆ ಸಮೀಪಿಸುತ್ತಿದೆ. ಪ್ರಚಾರ ವಿಭಾಗಗಳು ಇನ್ನಷ್ಟು ಚುರುಕಾಗಿ ಕೆಲಸ ಮಾಡಿ ಸರ್ಕಾರದ ಪರವಾಗಿ ಅಭಿಪ್ರಾಯ ರೂಪುಗೊಳ್ಳುವಂತೆ ಮಾಡಬೇಕು ಎಂದು ಕರೆ ನೀಡಿದರು. ಮುಂದಿನ ದಿನಗಳಲ್ಲಿ ಮಾಧ್ಯಮ ಹಾಗೂ ಸಾಮಾಜಿಕ ಜಾಲ ತಾಣಗಳ ಬಳಕೆ ಕುರಿತಂತೆ ಸಲಹೆಗಳನ್ನು ನೀಡಿದರು. ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹೇಳಿಕೆಗಳ ಮೇಲೆ ನಿಗಾ ಇಡಬೇಕು. ಕಾಂಗ್ರೆಸ್ ನಾಯಕರು ಮತ್ತು ಪಕ್ಷದ ವಿರುದ್ಧ ಆರೋಪ ಮಾಡಿದರೆ ಅವುಗಳಿಗೆ ಪ್ರತ್ಯುತ್ತರ ನೀಡಬೇಕು. ಆರೋಪಗಳಿಗೆ ಸೂಕ್ತ ದಾಖಲೆಗಳೊಂದಿಗೆ ಉತ್ತರ ನೀಡಬೇಕು. ಸಾಮಾಜಿಕ ಮಾಧ್ಯಮ ಮತ್ತು ಮಾಧ್ಯಮ ಘಟಕ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು ಎಂದು ವೇಣುಗೋಪಾಲ್ ಸೂಚಿಸಿದ್ದಾರೆ. ಗರಿಷ್ಠ ಮುಖ ಬೆಲೆಯ ನೋಟುಗಳ ರದ್ದತಿಯಿಂದ ಉಂಟಾದ ಪರಿಣಾಮ, ಜಿಎಸ್‌ಟಿಯಿಂದ ಸಾರ್ವಜನಿಕರು ಮತ್ತು ಸಣ್ಣ ಉದ್ಯಮಿಗಳಿಗೆ ಆಗಿರುವ ದುಷ್ಪರಿಣಾಮ ಮತ್ತು ಜಿಡಿಪಿ ಕುಸಿತ ಮುಂತಾದ ವಿಷಯಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಕರೆ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೇಣುಗೋಪಾಲ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಮಾತಾಡುವುದಕ್ಕೆ ಬಿಜೆಪಿ ಅವರಿಗೆ ನೈತಿಕ ಹಕ್ಕಿಲ್ಲ. ಇವರೇ ಕಾನೂನು ಸುವ್ಯವಸ್ಥೆ ಹದಗೆಡುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು. ಗೌರಿ ಲಂಕೇಶ್ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕತೆಯಿಲ್ಲ. ಅವರ ಹತ್ಯೆಯ ತನಿಖೆಯನ್ನು ಸಿಟ್ ನಡೆಸುತ್ತಿದೆ. ಈ ಹಂತದಲ್ಲಿ ಸರ್ಕಾರದ ವಿರುದ್ಧ ಆರೋಪ ಮಾಡುವುದು ಎಷ್ಟರಮಟ್ಟಿಗೆ ಸರಿ ಪ್ರಶ್ನಿಸಿದ ಅವರು, ಗೌರಿ ಅಂತ್ಯಸಂಸ್ಕಾರದಲ್ಲಿ ಬಿಜೆಪಿ ನಾಯಕರು ಸುಳಿಯಲಿಲ್ಲ. ಆ ಬಗ್ಗೆ ಮಾಧ್ಯಮಗಳು ತೋರಿಸಲಿಲ್ಲ ಎಂದು ದೂರಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪರಮೇಶ್ವರ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅಣ್ಣ ತಮ್ಮಂದಿರಂತೆ ಕೆಲಸ ಮಾಡುತ್ತಿದ್ದಾರೆ. ನಾನು ಕೊನೆಯ ವಾರವೂ ಮುಖ್ಯಮಂತ್ರಿ ಮತ್ತು ಪರಮೇಶ್ವರ್ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ. ಅವರ ನಡುವೆ ಯಾವುದೇ ಸಮಸ್ಯೆ ಇಲ್ಲ. ಒಟ್ಟಿಗೆ ಸಂಘಟನೆ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ವಿರುದ್ಧ ಹೋರಾಟ ನಡೆಸಲು ಇಬ್ಬರು ಸಜ್ಜಾಗುತ್ತಿದ್ದಾರೆ. ಅವರಿಬ್ಬರೂ ಸೇರಿ ಬಿಜೆಪಿಗೆ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು. ಡಾ.ಜಿ.ಪರಮೇಶ್ವರ್ ಮಾತನಾಡಿ, ಮುಖ್ಯಮಂತ್ರಿ ಮತ್ತು ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಮ್ಮೊಳಗೆ ಯಾವುದೇ ಅಸಮಾಧಾನವೂ ಇಲ್ಲ. ಒಂದೆರಡು ದಿನಗಳ ಹಿಂದೆ ತಾವೇ ಸಿದ್ದರಾಮಯ್ಯ ಅವರ ಮನೆಗೆ ಹೋಗಿ ಗಂಟೆಗಳ ಕಾಲ ಪಕ್ಷ ಮತ್ತು ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ನಮ್ಮಿಬ್ಬರ ಮಧ್ಯೆ ಭಿನ್ನಮತ ಇದೆ ಎಂಬುದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: