ಮೈಸೂರು

ಕುಡಿದ ಮತ್ತಿನಲ್ಲಿ ವ್ಯಕ್ತಿಯಿಂದ ಮಹಿಳೆ ಮೇಲೆ ಹಲ್ಲೆ

ಮದ್ಯವ್ಯಸನಿ ವ್ಯಕ್ತಿಯೋರ್ವ ಮಹಿಳೆಗೆ ಶನಿವಾರ ಬೆಳಿಗ್ಗೆ 7ಗಂಟೆ ಸುಮಾರಿಗೆ  ಮೈಸೂರಿನ ಆರ್.ಟಿ.ಓ ಸರ್ಕಲ್ ಬಳಿ ಚಾಕುವಿನಿಂದ ಇರಿದು ಹಲ್ಲೆ ಮಾಡಿದ ಘಟನೆ ನಡೆದಿದೆ.

ಹಲ್ಲೆ ಮಾಡಿದ ವ್ಯಕ್ತಿಯನ್ನು ಮೇಟಗಳ್ಳಿ ನಿವಾಸಿ ರಾಚಪ್ಪ(40)ಎಂದು ಹೇಳಲಾಗಿದ್ದು, ಹಲ್ಲೆಗೊಳಗಾದ ಮಹಿಳೆಯನ್ನು ಶ್ರೀರಾಂಪುರ ನಿವಾಸಿ ಜಯಲಕ್ಷ್ಮಿ (35)ಎಂದು ಗುರುತಿಸಲಾಗಿದೆ. ರಾಚಪ್ಪ ಕುಡಿದ ಮತ್ತಿನಲ್ಲಿ ಈ ರೀತಿ ಹಲ್ಲೆ ಮಾಡಿದ್ದಾನೆಂದು ಹೇಳಲಾಗಿದ್ದು, ಇವರಿಬ್ಬರು ಮೊದಲು ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇದೀಗ ಇಬ್ಬರೂ ಬೇರೆ ಬೇರೆ ಮದುವೆಯಾಗಿದ್ದು ಇವರಿಬ್ಬರ ನಡುವೆ ಸದಾ ಮಾತಿನ ಚಕಮಕಿ ನಡೆಯುತ್ತಲೇ ಇರುತ್ತಿತ್ತು ಎಂದು ತಿಳಿದುಬಂದಿದೆ.

ಶನಿವಾರ ಬೆಳಿಗ್ಗೆ ಮಾತಿಗೆ ಮಾತು ಬೆಳೆದು ರಾಚಪ್ಪ ಜಯಲಕ್ಷ್ಮಿಯವರ ಎದೆಗೆ ಚಾಕುವಿನಿಂದ ತಿವಿದಿದ್ದಾನೆ. ಇದನ್ನು ನೋಡಿದ ಸ್ಥಳೀಯರು ರಾಚಪ್ಪನಿಗೆ ಹಿಗ್ಗಾಮುಗ್ಗಾ ಥಳಿಸಿದ್ದು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.

ಜಯಲಕ್ಷ್ಮಿಯವರ ಸ್ಥಿತಿ ಚಿಂತಾಜನಕವಾಗಿದ್ದು, ಜೆ.ಎಸ್.ಎಸ್.ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ರಾಚಪ್ಪನನ್ನು ತಪಾಸಣೆಗಾಗಿ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

comments

Related Articles

error: